ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶೈಕ್ಷಣಿಕ ಸೌಲಭ್ಯ ಸದುಪಯೋಗ- ಕಾಶಪ್ಪನವರ

ಬಾಗಲಕೋಟೆ/ಹುನಗುಂದ: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಏಕಾಗ್ರತೆ, ಸತತ ಅಧ್ಯಯನದಿಂದ ನಾವಿಟ್ಟುಕೊಂಡ ಗುರಿಯನ್ನು ಮುಟ್ಟಲು ಸಾಧ್ಯ. ಸರ್ಕಾರ ಶಿಕ್ಷಣಕ್ಕಾಗಿ ಅನೇಕ ಸೌಲಭ್ಯಗಳನ್ನು ಒದಗಿಸಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ಶಾಸಕ ವಿಜಯಾನಂದ ಕಾಶಪ್ಪನವರ ಅಭಿಪ್ರಾಯಪಟ್ಟಿದ್ದಾರೆ.
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ದ್ವಿತೀಯ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್.ಆರ್.ಕೆ.ದತ್ತಿ ಪುರಸ್ಕಾರ, ನೂತನ ಆದರ್ಶ ಸರ್ಕಾರಿ ಪದವಿಪೂರ್ವ ಕಾಲೇಜಿನ ಉದ್ಘಾಟನೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮೂರು ತಲೆಮಾರಿನಿಂದ ಶಿಕ್ಷಣ ಸೇರಿದಂತೆ ಜನಹಿತ ಕಾರ್ಯಗಳಿಗೆ ನಮ್ಮ ಕುಟುಂಬ ನಿರಂತರ ಶ್ರಮಿಸಿದೆ. ಈ ಮತಕ್ಷೇತ್ರದ ಜನಸೇವೆ ಮಾಡುವ ಕಾರ್ಯಕ್ಕೆ ನಾನು ಬದ್ಧನಿದ್ದು ಅದಕ್ಕೆ ಜನಾಶೀರ್ವಾದವೇ ಸಾಕ್ಷಿ. ಪ್ರಾಥಮಿಕ ಹಂತದಿಂದ ಪದವಿವರೆಗೆ ಒಂದೇ ಆವರಣದಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದ್ದು ಮುಂಬರುವ ದಿನಗಳಲ್ಲಿ ಹುನಗುಂದ ಹಾಗೂ ಇಲಕಲ್ ನಗರಗಳಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಆರಂಭಿಸಲಾಗುವದೆಂದರು.
ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಉಪಾಧ್ಯಕ್ಷೆ ರಾಜಮ್ಮ ಬಾದಾಮಿ, ಉದ್ಯಮಿ ಶಾಂತಣ್ಣ ಸುರಪುರ, ಪದವಿ ಕಾಲೇಜಿನ ಸಿಡಿಸಿ ಉಪಾಧ್ಯಕ್ಷ ವಿಜಯ ಮಹಾಂತೇಶ ಗದ್ದನಕೇರಿ, ದತ್ತಿ ಪುರಸ್ಕಾರದ ದಾನಿ ಎಸ್ಕೆ.ಕೊನೆಸಾಗರ, ಮುಖ್ಯಾಧಿಕಾರಿ ಗುರುರಾಜ ಚೌಕಿಮಠ, ಪಿಯು ಕಾಲೇಜು ಸಿಡಿಸಿ ಸದಸ್ಯರು, ಆದರ್ಶ ವಿದ್ಯಾಲಯದ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಬಸರಾಜ ರಕ್ಕಸಗಿ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಶಾಂತಾ ಸಂಗಮ ಪ್ರಾರ್ಥಿಸಿದರು. ಪ್ರಾಚಾರ್ಯ ಶರಣಪ್ಪ ಹೂಲಗೇರಿ ಸ್ವಾಗತಿಸಿದರು. ವಿ.ಕೆ.ಶಶಿಮಠ ವಂದಿಸಿದರು. ಡಾ.ಎನ್.ವಾಯ್.ನದಾಫ ನಿರೂಪಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!