ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

‘ಸಾಹಸ ಸಿಂಹ’ ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ರಾಜ್ಯ ಸರ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ

ಬೆಂಗಳೂರು: ನಟ, ಸಾಹಸ ಸಿಂಹ ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದೆ. ಸಿ. ಎಂ. ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಮಾಡಲಾಗಿದೆ.
ಸಚಿವ ಹೆಚ್​. ಕೆ. ಪಾಟೀಲ್ ಅವರು ಈ ವಿಷಯ ತಿಳಿಸಿದರು. ಈ ಸಿಹಿ ಸುದ್ದಿ ಕೇಳಿ ಅಭಿಮಾನಿಗಳಿಗೆ ಬಹಳ ಸಂತಸ ಆಗಿದೆ. ಈ ಮೊದಲು ಚಿತ್ರರಂಗದಿಂದ ಡಾ. ರಾಜ್​​ಕುಮಾರ್ ಮತ್ತು ಪುನೀತ್ ರಾಜ್​ಕುಮಾರ್ ಅವರಿಗೆ ಈ ಪ್ರಶಸ್ತಿ ನೀಡಲಾಗಿತ್ತು.
ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ ಕನ್ನಡ ಚಿತ್ರರಂಗದ ಲೆಜೆಂಡರಿ ಕಲಾವಿದರಾದ ಡಾ. ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಇದು ಅವರ ಅಭಿಮಾನಿಗಳಿಗೆ ಅಪಾರ ಸಂತಸ ಉಂಟುಮಾಡಿದೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ವಿಷ್ಣುವರ್ಧನ್ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಅದೇ ರೀತಿ ಬಿ. ಸರೋಜಾದೇವಿ ಕೂಡ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದರು. ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ನೀಡಬೇಕು ಎಂಬುದು ಕುಟುಂಬದವರ ಮತ್ತು ಅಭಿಮಾನಿಗಳ ಮನವಿ ಆಗಿತ್ತು.
ಅಲ್ಲದೆ, ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟವು ನಿರ್ಧರಿಸಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!