ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೂದಿಹಾಳ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಬೆಳಗಾವಿ/ ಬೈಲಹೊಂಗಲ: 2025-26 ನೇ ಸಾಲಿನ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಬಾಲಕರ 4X400 ರಿಲೇ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕರ ವಿಭಾಗದಲ್ಲಿ ಮುತ್ತುರಾಜ ಜೋಗಿಗುಡ್ಡ 1500 ಮೀ ಓಟದಲ್ಲಿ ಪ್ರಥಮ, ಕಲ್ಮೇಶ ಗುಡ್ಡದ 3000 ಮೀ ಓಟದಲ್ಲಿ ದ್ವಿತೀಯ, ಬಸವರಾಜ ಕುರಿ 200 ಮೀ ಓಟ ಪ್ರಥಮ, ಎತ್ತರ ಜಿಗಿತ ದ್ವಿತೀಯ, ಸಮಗ್ರ ವೀರಾಗ್ರಣಿ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಉತ್ತಮ ಸಾಧನೆಗೆ ಮುಖ್ಯ ಶಿಕ್ಷಕರಾದ ಎನ್. ಆರ್. ಠಕ್ಕಾಯಿ, ಶಿಕ್ಷಕರಾದ ಜೆ.ಆರ್.ನರಿ, ಎಸ್.ವಿ.ಬಳಿಗಾರ, ಎಚ್.ವಿ.ಪುರಾಣಿಕ, ಎಮ್.ಎನ್.ಕಾಳೆ, ವೀರೇಂದ್ರ ಪಾಟೀಲ, ಸಂತೋಷ ಸಾಳುಂಕೆ, ಹಾಗೂ ಎಸ್.ಡಿ.ಎಮ್.ಸಿ ಪದಾಧಿಕಾರಿಗಳು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಪಿ.ಎಸ್.ಗುರುನಗೌಡರ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.

ವರದಿ ಉಮೇಶ ಗೌಡರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!