ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಕ್ಫ್ (ತಿದ್ದುಪಡಿ) ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು

ಶಿವಮೊಗ್ಗ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹಾಗೂ ಹಿಂದುಗಳಿಗೆ ಸಿಕ್ಕ ಜಯ!

ವಕ್ಫ್ (ತಿದ್ದುಪಡಿ) ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ, ಸಂಪೂರ್ಣ ಕಾಯ್ದೆಗೆ ತಡೆ ನೀಡುವುದನ್ನು ನಿರಾಕರಿಸಿ, ಕೆಲ ನಿಬಂಧನೆಗಳಿಗೆ ಮಾತ್ರ ತಾತ್ಕಾಲಿಕ ತಡೆ ನೀಡಿರುವುದು ನ್ಯಾಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸುವ ಮಹತ್ವದ ಹೆಜ್ಜೆಯಾಗಿದೆ.

ಹಿಂದೂಗಳ ದೇವಾಲಯಗಳು, ಧಾರ್ಮಿಕ ಆಸ್ತಿಗಳು ಮತ್ತು ಸಾಂಸ್ಕೃತಿಕ ಪರಂಪರೆಗಳ ಮೇಲೆ ಅತಿಕ್ರಮಣವಾಗದಂತೆ ಕಾಯುವ ಹಕ್ಕು ನಮ್ಮ ಪ್ರತಿಯೊಬ್ಬರಿಗೂ ಇದೆ. ಈ ತೀರ್ಪು ಆ ಹಕ್ಕನ್ನು ಗೌರವಿಸುವ ಮಹತ್ವದ ಹೆಜ್ಜೆಯಾಗಿದೆ. ಶತಮಾನಗಳಿಂದ ಹಿಂದೂಗಳು ಕಟ್ಟಿಕೊಂಡು ಬಂದ ಪವಿತ್ರ ತಾಣಗಳು, ಧಾರ್ಮಿಕ ಆಸ್ತಿಗಳು ಮತ್ತು ಸಂಸ್ಕೃತಿಯ ಸಂರಕ್ಷಣೆಯ ಜೊತೆಗೆ ರೈತರ ಜಮೀನುಗಳ ಹಿತದೃಷ್ಟಿಯಲ್ಲಿಯೂ ನ್ಯಾಯಾಂಗ ನೀಡಿದ ಭರವಸೆ ಇದಾಗಿದೆ.

ಈ ತೀರ್ಪು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ನಿಲುವಿಗೆ ಬೆಂಬಲ ನೀಡಿದಂತೆಯೇ, ಹಿಂದು ಸಮಾಜದ ಆತಂಕ ಮತ್ತು ಹಕ್ಕುಗಳಿಗೆ ತೃಪ್ತಿ ನೀಡಿದೆ. ಇದರಿಂದ ಜನರ ಧ್ವನಿಗೆ ಗೌರವ ಸಿಕ್ಕಿದೆ, ನ್ಯಾಯಾಂಗದ ಮೇಲೆ ವಿಶ್ವಾಸ ಇನ್ನಷ್ಟು ಬಲವಂತವಾಗಿದೆ.

ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಮತ್ತು ಗೌರವಾನ್ವಿತ ನ್ಯಾಯಮೂರ್ತಿ ಎ.ಜಿ. ಮಸೀಹ್ ಅವರ ಪೀಠ ನೀಡಿದ ಈ ತೀರ್ಪು ನ್ಯಾಯಾಂಗದ ತಟಸ್ಥತೆ, ಸಮತೋಲನ ಮತ್ತು ದೂರದೃಷ್ಟಿಯ ಉದಾಹರಣೆಯಾಗಿದೆ.

ನ್ಯಾಯಾಂಗದ ಈ ತೀರ್ಪು, ಕಾನೂನು ಪ್ರಕ್ರಿಯೆಯ ಮೇಲೆ ನಾಗರಿಕರ ನಂಬಿಕೆಯನ್ನು ಇನ್ನಷ್ಟು ಬಲಪಡಿಸಿದೆ. ಮುಂದಿನ ದಿನಗಳಲ್ಲಿ ಈ ಕಾಯ್ದೆಗೆ ಸಂಬಂಧಿಸಿದಂತೆ ನಡೆಯಲಿರುವ ವಿಚಾರಣೆಯಲ್ಲಿ, ನ್ಯಾಯಾಂಗವು ದೇಶದ ಸಂವಿಧಾನಬದ್ಧ ಮೌಲ್ಯಗಳಿಗೆ ಅನುಗುಣವಾಗಿ ತೀರ್ಪು ನೀಡಲಿದೆ ಎಂಬ ವಿಶ್ವಾಸ ನಮ್ಮದಲ್ಲಿದೆ ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕೊಡಕ್ಕಲ್ ಶಿವಪ್ರಸಾದ್
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!