ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಅಡಿಯಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯರಾದ ಡಾ. ಶ್ರೀನಿವಾಸ್ ರೆಡ್ಡಿ ಬಿ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿ ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆಯ ನಿರ್ಮಾಣದಲ್ಲಿ ಯುವಕರ ಜವಾಬ್ದಾರಿ ಬಗ್ಗೆ ತಿಳಿಸಿದರು. ನಂತರ
ಮಾತನಾಡಿದ ಚುನಾವಣಾ ಸಾಕ್ಷರತಾ ಸಮಿತಿಯ ಸಂಚಾಲಕರಾದ ರಾಜ್ಮಾ ಟಿ. ಎಂ. ಆರ್. ಜನಸಾಮಾನ್ಯರಲ್ಲಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗೆಗಿನ ಅರಿವು ಮೂಡಿಸುವುದಕ್ಕಾಗಿ ದಿನಾಂಕ 15/9/2025 ರಿಂದ 20/09/25 ರವರೆಗೆ ಆಯೋಜಿಸಿರುವ ಆನ್ಲೈನ್ ರಸಪ್ರಶ್ನೆ (E quiz) ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ಹೇಳುತ್ತಾ ಪ್ರತಿಯೊಬ್ಬರೂ ಭಾಗವಹಿಸಿ ಈ ಪ್ರಮಾಣ ಪತ್ರವನ್ನು ಪಡೆಯಬಹುದು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಬಾಲಾಜಿ ಎಂ. ಪಿ. ಸಮಾಜಶಾಸ್ತ್ರದ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಬಿ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಕೆ. ಮಹೇಶ, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅನ್ನಪೂರ್ಣ ಗುಡುದೂರು, ಗ್ರಂಥ ಪಾಲಕರಾದ ಎ.ಜಿ. ವೀರಭದ್ರಪ್ಪ ಅಧಿಕ್ಷಕರಾದ ನಾಗಮ್ಮ, ಬಿ. ಪ್ರಥಮ ದರ್ಜೆ ಸಹಾಯಕರಾದ ಸಿದ್ಧಾರೂಢ ಇತರೆ ಬೋಧಕ್ಕೆತರ ಸಿಬ್ಬಂದಿ ಮತ್ತು ಮಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!