ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಸ್ತೆ ಮಧ್ಯದಲ್ಲಿ ಕಾಣಿಸಿಕೊಂಡ ಬೃಹತ್ ಬೋಂಗ : ಸಂಚಾರಕ್ಕೆ ಸಂಚಕಾರ : ಬೋಂಗ ದುರಸ್ಥಿಗೆ ಆಗ್ರಹ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನ ಬಳಿಯ ಕಂಪ್ಲಿ-ಗಂಗಾವತಿ ಸಂಪರ್ಕದ ಮುಖ್ಯರಸ್ತೆಯಲ್ಲಿರುವ ವಿಜಯನಗರ ಉಪ ಕಾಲುವೆಯ ಕಿರು ಸೇತುವೆಯ ರಸ್ತೆ ಮಧ್ಯದಲ್ಲಿ ಬೋಂಗ ಬಿದ್ದಿದ್ದು, ಅಪಘಾತಕ್ಕೆ ಆಹ್ವಾನಿಸುವಂತಿದೆ.
ಇಲ್ಲಿನ ರಸ್ತೆಯಲ್ಲಿ ಕಂಪ್ಲಿ-ಗಂಗಾವತಿ ಸಂಪರ್ಕದಿಂದ ಸಾಕಷ್ಟು ವಾಹನಗಳು ಸಂಚರಿಸುತ್ತಿದ್ದು, ಇಲ್ಲಿನ ಕಾಲುವೆಯ ಮುಖ್ಯರಸ್ತೆ ಮಧ್ಯದಲ್ಲಿ ದೊಡ್ಡ ಬೋಂಗ ಬಿದ್ದಿದ್ದು, ಜನರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವ ಅನಿವಾರ್ಯತೆ ಉಂಟಾಗಿದೆ.
ಇಲ್ಲಿನ ರಸ್ತೆಯ ಕಿರು ಸೇತುವೆಯ ಎಡ ಮತ್ತು ಬಲಗಡಿಗೆ ರಕ್ಷಣಾ ಕಂಬಿಗಳಿಲ್ಲದಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಕಿರು ಸೇತುವೆ ಎತ್ತರಿಸದ ಪರಿಣಾಮ ಸಾಕಷ್ಟು ತೊಂದರೆ ಉಂಟಾಗಿದ್ದು, ಸುಗಮ ಸಂಚಾರಕ್ಕೆ ಸಂಚಕಾರ ತಂದೊಡ್ಡಿದೆ.
ಮುಂದಿನ ಅವಘಡಕ್ಕೆ ಎಡೆ ಮಾಡಿಕೊಡದೆ, ಸಂಬಂಧಿಸಿದ ಅಧಿಕಾರಿಗಳು ಎಚ್ಚರವಹಿಸಿ, ಇಲ್ಲಿನ ರಸ್ತೆಯಲ್ಲಿ ಬಿದ್ದಿರುವ ಬೋಂಗವನ್ನು ಮುಚ್ಚಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂಬುದು ಪ್ರತಿಯೊಬ್ಬರ ಆಶಯವಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!