ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಿ ಎಲ್ ಡಿ ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ ಮಾಡಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ಬೆಳಗಾವಿ /ಅಥಣಿ: ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಮಾಡುವುದರಿಂದ ರೈತರಿಗೆ ನಷ್ಟವಾಗುತ್ತದೆ, ರೈತರಿಗೆ ನಷ್ಟವಾದರೆ ಯಾರಿಗೂ ಉಳಿಗಾಲವಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿ ಹೇಳಿದರು.

ಸಹಕಾರ ಕ್ಷೇತ್ರವು ರೈತರಿಗೆ ‘ಕಾಮಧೇನು’ ಇದ್ದಂತೆ ಎಂದ ಅವರು, ಈ ಕ್ಷೇತ್ರದಲ್ಲಿ ಎಲ್ಲರೂ ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಅವರು ಅಥಣಿ ಪಟ್ಟಣದಲ್ಲಿ ಅಥಣಿ ತಾಲ್ಲೂಕಾ ಪ್ರಾಥಮಿಕ ಸಹಕಾರಿ ಮತ್ತು ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ ನವೀಕೃತ ಕಟ್ಟಡವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
“ಸಹಕಾರ ಕ್ಷೇತ್ರವು ರೈತರ ಪಾಲಿಗೆ ದೊಡ್ಡ ಆಧಾರವಾಗಿದೆ. ಇಲ್ಲಿ ರೈತರಿಗೆ ಸುಲಭವಾಗಿ ಸಾಲ ಲಭ್ಯವಾಗುವುದರಿಂದ ಅವರಿಗೆ ದೊಡ್ಡ ಸಹಾಯವಾಗುತ್ತದೆ.

ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಆದಷ್ಟು ಠೇವಣಿ ಗಳನ್ನು ಸಂಗ್ರಹಿಸುವ ಕೆಲಸ ಮಾಡಬೇಕು ಹಾಗೂ ರೈತರಿಂದ ಸಂಗ್ರಹಿಸಿದ ಠೇವಣಿಯನ್ನು ಮತ್ತೆ ರೈತರಿಗೆ ಸಾಲವಾಗಿ ನೀಡಿ, ಬ್ಯಾಂಕನ್ನು ಇನ್ನಷ್ಟು ಬೆಳೆಸಬೇಕು” ಎಂದು ಕಿವಿಮಾತು ಹೇಳಿದರು.

ಗ್ರಾಹಕರಿಗೆ ಉತ್ತಮ ಸೇವೆ ಸೌಲಭ್ಯ ನೀಡದಿದ್ದಲ್ಲಿ ಅಂತ ಬ್ಯಾಂಕುಗಳು ದಿವಾಳಿಯಾಗುತ್ತವೆ. ಇದನ್ನು ಗಮನವಿಟ್ಟು ಸಹಕಾರಿ ರಂಗದಲ್ಲಿನ ಬ್ಯಾಂಕುಗಳು ವ್ಯವಹಾರ ನಡೆಸಬೇಕು. ರೈತರಿಗೆ ಮೊದಲ ಆದ್ಯತೆ ನೀಡಿ ಸಾಲ ಸೌಲಭ್ಯ ಕಲ್ಪಿಸಬೇಕು. ರೈತರ ಕಲ್ಯಾಣಕ್ಕಾಗಿ ಬ್ಯಾಂಕುಗಳು ವಿಶೇಷ ಕೊಡುಗೆಗಳನ್ನು ನೀಡಿ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಇದೆ ಕಾರ್ಯಕ್ರಮದಲ್ಲಿ ಶೆಟ್ಟರ ಮಠದ ಮ.ನಿ.ಪ್ರ. ಮರುಳಸಿದ್ಧ ಮಹಾಸ್ವಾಮೀಜಿಗಳು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ದುಂಡಪ್ಪ ಅಸ್ಕಿ, ಕೃ.ಸ.ಸ.ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ, ಭರತ ಮಾಳಿ, ಎಸ್. ಸಂಗಮೇಶ, ರಾಜು ಭೈರುಗೋಳ, ಜ್ಯೋತಿಕುಮಾರ್ ಪಾಟೀಲ್ , ಅಶೋಕ್ ಪಡನಾಡ, ಕಲಗೌಡ ಪಾಟಿಲ,ವ್ಯವಸ್ಥಾಪಕರಾದ ಆರ್. ಎಚ್ .ತೇರದಾಳ, ಅಶೋಕ್ ಪಡನಾಡ, ಶ್ರೀಶೈಲ್ ನಾಯಿಕ, ರವೀಂದ್ರ ಗಾಣಿಗೇರ್, ಶೇಖರ್ ವಳಸಂಗ ಸೇರಿದಂತೆ ಆಡಳಿತ ಮಂಡಳಿ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ವರದಿಗಾರ. ವಿಠ್ಠಲ ಖೋಕಾಟೆ ಅಥಣಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!