ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಾಲ್ಮೀಕಿ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ

ಚಾಮರಾಜನಗರ/ ಹನೂರು: ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಯಿತು.
ಈ ಸಭೆಯ ಅಧ್ಯಕ್ಷತೆಯನ್ನು ಶಾಸಕ ಎಂ.ಆರ್. ಮಂಜುನಾಥ್ ವಹಿಸಿದ್ದರು.

ಸಭೆಯಲ್ಲಿ ಸ್ಥಳೀಯ ಮುಖಂಡರು ಮಾತನಾಡಿ, ಈ ಬಾರಿ ಹನೂರಿನಲ್ಲಿ ವಾಲ್ಮೀಕಿ ಜಯಂತಿಯನ್ನು ಹೆಚ್ಚು ಅದ್ದೂರಿಯಾಗಿ, ತಾಲೂಕು ಮಟ್ಟದಲ್ಲಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಆಚರಿಸಬೇಕೆಂಬ ಬೇಡಿಕೆಯನ್ನು ಮಂಡಿಸಿದರು. ಇದೇ ವೇಳೆ, ಅಗತ್ಯ ಸಹಕಾರ ನೀಡಲು ಅವರು ಶಾಸಕರ ಗಮನ ಸೆಳೆದರು.

ಬಳಿಕ ಮಾತನಾಡಿ ಶಾಸಕರು ವಾಲ್ಮೀಕಿ ಮಹರ್ಷಿಯವರ ಜೀವನ ಸಂದೇಶಗಳು ಇಂದು ಸಮಾಜಕ್ಕೆ ಮಾರ್ಗದರ್ಶಕವಾಗಿವೆ. ಈ ಆಚರಣೆಯನ್ನು ಸಾಂಸ್ಕೃತಿಕ, ಧಾರ್ಮಿಕ ಹಾಗೂ ಶಿಸ್ತುಬದ್ಧ ರೀತಿಯಲ್ಲಿ ಆಚರಿಸಲು ಹಮ್ಮಿಕೊಳ್ಳಲಾಗುಗಮವುದು ಎಲ್ಲಾ ಇಲಾಖೆಗಳ
ಸಹಕಾರದೊಂದಿಗೆ ನಡೆಯುವಂತೆ ಕ್ರಮ ಕೈಗೊಳ್ಳಲಾಗುತ್ತದೆ ” ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮಮ್ತಾಜ್ ಬಾನು, ತಾಲೂಕು ದಂಡಾಧಿಕಾರಿ ಚೈತ್ರಾ, ಇಓ ಉಮೇಶ್, ತಾಲೂಕು ಅಲ್ಪಸಂಖ್ಯಾತರ ಕಲ್ಯಾಣಧಿಕಾರಿ ರಾಜೇಶ್, ಚೆಸ್ಕಾಂ ಎಇಇ ರಂಗಸ್ವಾಮಿ, ಕುಡಿರುವ ನೀರಿನ ನೈರ್ಮಲ್ಯ ಇಲಾಖೆಯ ಎಇಇ ಸುಧನ್ವನಾಗ್, ತಾಲೂಕು ಆರೋಗ್ಯಾಧಿಕಾರಿ ಪ್ರಕಾಶ್,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಅಂಬಿಕಾ,ತಾಲೂಕು ನಾಯಕ ಸಮುದಾಯದ ಅಧ್ಯಕ್ಷರಾದ ಪುಟ್ಟವಿರನಾಯಕ,ಪ್ರಧಾನ ಕಾರ್ಯದರ್ಶಿ ರಾಚಪ್ಪ, ಉಪಾಧ್ಯಕ್ಷರಾದ ವೆಂಕಟಮಾದು ಸೇರಿದಂತೆ ತಾಲೂಕಿನ ಮುಖಂಡರುಗಳು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!