ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಾತಿಗಣತಿ ಸಮೀಕ್ಷೆಗೆ ಚಾಲನೆ ನೀಡಿದ ಶಾಸಕ ಕಂದಕೂರು

ಗ್ರಾಮೀಣ ಭಾಗದಲ್ಲಿ ಸಂಯಮದಿಂದ ಸಮೀಕ್ಷೆ ನಡೆಸಲು ಗಣತಿದಾರರಿಗೆ ಮನವಿ.

ಗುರುಮಠಕಲ್: ಸೆ. 22 ಸಮೀಕ್ಷೆ ವೇಳೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕೇಳಲಾಗುವ ಪ್ರಶ್ನೆಗಳು ಮತ್ತು ದಾಖಲೆಗಳಿಗೆ ಸಂಬಂಧಿಸಿದಂತೆ ಜನರಲ್ಲಿ ಗೊಂದಲ ಮತ್ತು ಗಾಬರಿ ಮೂಡುವ ಸಾಧ್ಯತೆ ಇದ್ದು, ಸಮೀಕ್ಷೆಗೆ ತೆರಳುವ ಗಣತಿದಾರರು ಸಂಯಮದಿಂದ ಸಮೀಕ್ಷೆ ಮಾಡಲು ಶಾಸಕ ಶರಣಗೌಡ ಕಂದಕೂರು ಸಲಹೆ ನೀಡಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಾಂಕೇತಿಕವಾಗಿ ಕೆಲವು ಶಿಕ್ಷಕರಿಗೆ ಗಣತಿ ಕಿಟ್ ನೀಡಿ ಮಾತನಾಡಿದ ಶಾಸಕ ಶರಣಗೌಡ ಕಂದಕೂರು
ತಾಲೂಕಿನ 258 ಪ್ರಾಥಮಿಕ ಶಿಕ್ಷಕರು ಮತ್ತು 13 ಜನ ಮೇಲ್ವಿಚಾರಕರನ್ನು ಸಮೀಕ್ಷೆಗೆ ನಿಯೋಜಿಸಿದ್ದು, ತಾಲೂಕಿನ ತಹಶೀಲ್ದಾರ್ ರು ಎಲ್ಲಾ ಮೇಲ್ವಿಚಾರಕರಿಗೆ ಮಾರ್ಗದರ್ಶನ ನೀಡಲಿದ್ದಾರೆ.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈ ಸಮೀಕ್ಷೆಯನ್ನು ನಡೆಸಲಿದ್ದು, ಇದಕ್ಕೆ ರಾಜ್ಯ ಸರಕಾರ ಅಧಿಕೃತವಾಗಿ ಅನುಮೋದನೆ ನೀಡಿದೆ ಸಾರ್ವಜನಿಕರು ಸಮೀಕ್ಷೆಗೆ ಸಹಕಾರ ನೀಡಲು ಮನವಿ ಮಾಡಿದರು.

ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಮನೆ ಮನೆಗೂ ತೆರಳಿ ಅವರಲ್ಲಿ ಸರಿಯಾದ ಮಾಹಿತಿ ಪಡೆಯಲು, ಹಾಗೂ ನೀಡಿರುವ ಮಾಹಿತಿಯಿಂದ ಯಾವುದೇ ಶೈಕ್ಷಣಿಕ, ಉದ್ಯೋಗ ಅವಕಾಶಗಳು ನೀವು ವಂಚಿತರಾಗುವುದಿಲ್ಲ ಈ ಹಿಂದೆಯೂ ಸಮೀಕ್ಷೆ ನಡೆದಿವೆ ಮುಂದೆ ಕೇಂದ್ರ ಸರಕಾರದಿಂದಲೂ ಸಮೀಕ್ಷೆಗಳು ನಡೆಯಬಹುದು. ಕಾಲ ಕಾಲಕ್ಕೆ ತಕ್ಕಂತೆ ಸರಕಾರಗಳು ಸಮೀಕ್ಷೆ ನಡೆಸುವದು ಸಾಮಾನ್ಯ ನ್ಯಾಯಾಲಯವು ಸಮೀಕ್ಷೆಗೆ ನಿರ್ದೇಶನ ನೀಡಿದ ಹಿನ್ನಲೆ ಸಮೀಕ್ಷೆ ಜರುಗುತ್ತಿದ್ದು ಜನ ಭಯ ಪಡುವ ಅವಶ್ಯಕತೆ ಇಲ್ಲ, ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆಗೆ ಸ್ಪಷ್ಟ ಮಾಹಿತಿ ನೀಡಿ ಯಶಸ್ವಿಗೊಳಿಸಲು ಕರೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶಾಂತಗೌಡ ಬಿರಾದಾರ, ಗ್ರೇಡ್ 2 ತಹಶೀಲ್ದಾರ್ ನರಸಿಂಹ ಸ್ವಾಮಿ, ಶಿಕ್ಷಣ ಇಲಾಖೆಯ ರವೀಂದ್ರ ಚೌಹಾಣ್, ಬಾಲಪ್ಪ ಸಿರಿಗೆಂ, ಸಮೀಕ್ಷೆಗೆ ನಿಯೋಜನೆಗೊಂಡ ಶಿಕ್ಷಕರು ಪಾಲ್ಗೊಂಡಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!