ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಘದ ಬೆಳವಣಿಗೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ : ರಮಣರೆಡ್ಡಿ

ಬಳ್ಳಾರಿ / ಕಂಪ್ಲಿ : ಸಹಕಾರ ಸಂಘವು ಸುಮಾರು 4.61 ಲಕ್ಷ ನಿವ್ವಳ ಲಾಭಗಳಿಸುವ ಮೂಲಕ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ರಮಣರೆಡ್ಡಿ ಹೇಳಿದರು.
ಇಲ್ಲಿನ ಕೊರ್ಲಗುಂದಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿ ಆವರಣದಲ್ಲಿ ನಡೆದ ವಾರ್ಷಿಕ ಮಹಾಜನ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಸಂಘದ ಬೆಳವಣಿಗೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ. ಸಹಕಾರ ಸಂಘದಲ್ಲಿರುವ ಸಾಲ ಸೌಲಭ್ಯದೊಂದಿಗೆ ಇನ್ನಿತರ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಮುಖ್ಯ ಭಾಷೆಕಾರ್ಯನಿರ್ವಾಹಕ ಜಿ.ಆರ್.ಅರುಣಕುಮಾರ ವಾರ್ಷಿಕ ವರದಿ ಮಂಡಿಸಿ ಮಾತನಾಡಿ, ಸಂಘದಲ್ಲಿ 1536 ಜನ ಸದಸ್ಯರನ್ನು ಹೊಂದಿದೆ. ಕೆಸಿಸಿ, ಪಂಪ್ ಸೆಟ್ ಸಾಲ ಸೇರಿದಂತೆ ಸುಮಾರು 8.34 ಕೋಟಿ ಸಾಲ ವಿತರಿಸಿದ್ದು, ಶೇ.99% ವಸೂಲಾತಿ ಸಾಧನೆ ಮಾಡಿದೆ. 900 ಜನರಿಗೆ ಯಶಸ್ವಿನಿ ಯೋಜನೆ ಅಳವಡಿಸಲಾಗಿದೆ ಎಂದರು.
ತದ ನಂತರ ಇನ್ನಿತರ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷ ವಿ.ದೊಡ್ಡಕೇಶವರೆಡ್ಡಿ, ಸಹಕಾರ ಸಂಘದ ಉಪಾಧ್ಯಕ್ಷ ಬಿ.ದೊಡ್ಡ ಗಾದಿಲಿಂಗಪ್ಪ, ನಿರ್ದೇಶಕರಾದ ವಿ.ಪ್ರದೀಪರೆಡ್ಡಿ, ಕೆ.ತಿಮ್ಮಪ್ಪ, ಬಿ.ಅಡಿವೆಪ್ಪ, ವೈ.ದೇವರೆಡ್ಡಿ, ನಾಗನಗೌಡ, ವೈ.ಯೋಗಪ್ಪ, ಯಂಕಮ್ಮ, ನಾಗೇಶ್ವರಮ್ಮ, ಕೆ.ಲಕ್ಷ್ಮ್ಯೆ, ವಿ.ಶಾಂತಕುಮಾರ, ಬಿ.ಎಸ್.ನಾಗಭೂಷಣ ಸೇರಿದಂತೆ ರೈತ ಮುಖಂಡರು ಹಾಗೂ ಸಿಬ್ಬಂದಿ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!