ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಲ್ಕಾಪಲ್ಲಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಉದ್ಘಾಟಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ

ಕಲಬುರಗಿ/ ಸೇಡಂ ತಾಲೂಕಿನ ಮಲ್ಕಾಪಲ್ಲಿ ಗ್ರಾಮದಲ್ಲಿ 3.11 ಕೋಟಿ ರೂಪಾಯಿ ಅನುದಾನದಲ್ಲಿ ನಿರ್ಮಿಸಲಾಗಿರುವ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ವೈದ್ಯಕೀಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ನೂತನ ಕಟ್ಟಡ ಸುಸಜ್ಜಿತ 8 ಕೋಣೆಗಳು, ಶೌಚಾಲಯ, ಕುಡಿಯುವ ‌ನೀರಿನ ವ್ಯವಸ್ಥೆ, ಕಾಂಪೌಂಡ್ ತಡೆ ಗೋಡೆ ಒಳಗೊಂಡಿದ್ದು, ಕೆಕೆಆರ್‌ಡಿಬಿಯ ಅಕ್ಷರ ಆವಿಷ್ಕಾರ ಯೋಜನೆ ಮೂಲಕ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಮಟ್ಟ ಹೆಚ್ಚಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಅತ್ಯುತ್ತಮ ಶಾಲೆಗಳನ್ನಾಗಿಸಲು ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಎಐಸಿಸಿ ಅಧ್ಯಕ್ಷರು ಮತ್ತು ಹಿರಿಯರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಪರಿಶ್ರಮದ ಫಲವಾದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಈ ಭಾಗದ ಅನೇಕ ಬಡ ಮಕ್ಕಳಿಗೆ ಶಿಕ್ಷಣ, ಉದ್ಯೋಗ ದೊರಕುವಂತಾಗಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಕೋಲಕುಂದಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಬಸವರಾಜ ಮಾಲಿ ಮಾಲಿಪಾಟೀಲ, ಶಂಕರಗೌಡ, ವೆಂಕಟರೆಡ್ಡಿ, ಬಸಿರೆಡ್ಡಿ ಮುನಕನಪಲ್ಲಿ ,ವೀರಶೇಖರ ಸಜ್ಜನ, ಮಲ್ಕಾಪಲ್ಲಿ ಗ್ರಾಮದ ಹಿರಿಯ ಮುಖಂಡರು, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಪಕ್ಷದ ಮುಖಂಡರು ಇನ್ನಿತರರು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!