ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಥಣಿ ಪಟ್ಟಣದಲ್ಲಿ ನರೇಂದ್ರ ಮೋದಿಜಿ ಹುಟ್ಟು ಹಬ್ಬದ ಅಂಗವಾಗಿ ಭವ್ಯ ರಕ್ತದಾನ ಶಿಬಿರ

ಬೆಳಗಾವಿ/ಅಥಣಿ: ಭಾರತದ ಜನಪ್ರಿಯ ನಾಯಕ, ದೇಶವನ್ನು ವಿಶ್ವಮಟ್ಟದಲ್ಲಿ ಹೆಮ್ಮೆಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ, ಅಥಣಿ ಪಟ್ಟಣದ ಶ್ರೀ ಸಿದ್ಧೇಶ್ವರ ಮೋಫತ್ ವಾಚನಾಲಯದಲ್ಲಿ ಸೇವಾ ಪಾಕ್ಷಿಕ – 2025 ಅಭಿಯಾನದ ಅಂಗವಾಗಿ ಭವ್ಯ ರಕ್ತದಾನ ಶಿಬಿರ ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಅಪಾರ ಉತ್ಸಾಹದಿಂದ ರಕ್ತದಾನ ಮಾಡಿದ್ದು, ಪ್ರಧಾನಿಯವರ ಸೇವಾ ತತ್ವ, ಜನಸೇವೆ ಮತ್ತು ತ್ಯಾಗದ ಮನೋಭಾವವನ್ನು ಸ್ಮರಿಸಿದರು. ಕಾರ್ಯಕ್ರಮದ ಮೂಲಕ ಬಿಜೆಪಿ ಕಾರ್ಯಕರ್ತರು ಸಮಾಜ ಸೇವೆಯತ್ತ ತಮ್ಮ ಬದ್ಧತೆಯನ್ನು ಮತ್ತೊಮ್ಮೆ ತೋರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಮುಖರು:

ಅಥಣಿ ಮತಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ಮಹೇಶ ಕುಮಟಳ್ಳಿ, ಮಾಜಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಉಮೇಶ ಬಂಟೂಟ್ಕರ್, ಓಬಿಸಿ ಮೋರ್ಚಾ ಅಥಣಿ ಮಂಡಲ ಅಧ್ಯಕ್ಷ ಗಿರೀಶ್ ಬುಟ್ಟಾಳಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸಿದ್ದಪ್ಪಣ್ಣ ಮುದುಕನ್ನವರ್, ಅಥಣಿ ಮಂಡಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪುಟ್ಟು ಹಿರೇಮಠ್ ಸೇರಿದಂತೆ ಜಿಲ್ಲೆಯ ಪ್ರಮುಖ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಹಾಜರಿದ್ದರು.

ವಿಶೇಷತೆ:
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಏರ್ಪಟ್ಟ ಈ ಕಾರ್ಯಕ್ರಮವು ಜನಸೇವೆಯ ಹಬ್ಬದಂತೆ ನಡೆದಿದ್ದು, “ಸೇವೆನೇ ಸಮ್ಮಾನ” ಎಂಬ ತತ್ವದ ಪ್ರೇರಣೆಯೊಂದಿಗೆ ಬಿಜೆಪಿ ಕಾರ್ಯಕರ್ತರು ಸಮಾಜದ ಹಿತಕ್ಕಾಗಿ ಯಾವಾಗಲೂ ಸಜ್ಜಾಗಿರುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!