
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೊತ್ತರ ಅಧ್ಯಯನ ಕೇಂದ್ರ ಅಥಣಿ 2025-26ನೇ ಸಾಲಿನ ಶೈಕ್ಷಣಿಕ ಕ್ರೀಡೆ,ಸಾಂಸ್ಕೃತಿಕ, ರೆಡ್ ಕ್ರಾಸ್ ಮತ್ತು ವಿವಿಧ ಚಟುವಟಿಕೆಗಳಿಗೆ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆ ಮಾಡಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಕಾಂಗ್ರೆಸ್ ಪಕ್ಷದ ಯುವ ಧುರೀಣರು ಸಮಾಜ ಸೇವಕರಾದ ಸನ್ಮಾನ್ಯ ಶ್ರೀ ಚಿದಾನಂದ ಸವದಿಯವರು ಚಾಲನೆ ನೀಡಿದರು.
ಇದೇ ಸಮಾರಂಭದಲ್ಲಿ ನೆರೆದಿದ್ದ ಗಣ್ಯರು ಮತ್ತು ಪ್ರಾಚಾರ್ಯರು ಹಾಗೂ ಉಪನ್ಯಾಸಕರಿಂದ ಯುವ ಧುರೀಣರಾದ ಚಿದಾನಂದ ಸವದಿ ಅವರಿಗೆ ಸತ್ಕಾರ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.
ಇದೇ ವೇದಿಕೆಯಲ್ಲಿ ಗಣ್ಯ ವ್ಯಕ್ತಿಗಳು, ವಕೀಲರು, ಪ್ರಾಚಾರ್ಯರು, ಉಪನ್ಯಾಸಕರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದು ಈ ಕಾರ್ಯಕ್ರಮಕ್ಕೆ ಶೋಭೆ ತಂದರು.
ವರದಿ. ವಿಠ್ಠಲ ಖೋಕಾಟೆ



















