ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹದಗೆಟ್ಟ ಜವುಕು-ಜೀರಿಗನೂರು ಸಂಪರ್ಕ ಸೇತುವೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ : ಶಾಸಕ ಜೆ. ಎನ್. ಗಣೇಶ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಮಚಾಯತಿ ವ್ಯಾಪ್ತಿಯ ಜವುಕು ಹಾಗೂ ಜೀರಿಗನೂರು ಗ್ರಾಮಗಳ ಸಂಪರ್ಕ ಸೇತುವೆ ಇತ್ತೀಚಿನ ಭಾರಿ ಮಳೆಯಿಂದಾಗಿ ಬಹುತೇಕ ಹದಗೆಟ್ಟಿದ್ದು, ಶೀಘ್ರವಾಗಿ ದುರಸ್ತಿಗೆ ಮತ್ತು ನೂತನ ಸೇತುವೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತೇನೆಂದು ಶಾಸಕ ಜೆ. ಎನ್. ಗಣೇಶ ತಿಳಿಸಿದರು.
ಅವರು ಶುಕ್ರವಾರ ಜವುಕು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹದಗೆಟ್ಟಿ ಸಂಪರ್ಕ ಸೇತುವೆಯನ್ನು ಪರಿಶೀಲನೆ ನಡೆಸಿದ ನಂತರ ಸೇತುವೆ ದುರಸ್ತಿ ಬಗ್ಗೆ ಗ್ರಾಮದ ಸಾರ್ವಜನಿಕರೊಂದಿಗೆ ಚರ್ಚಿಸಿದರಲ್ಲದೆ, ಸಂಪರ್ಕ ಸೇತುವೆಯ ಅಗತ್ಯತೆಯನ್ನು ಸ್ಥಳೀಯರಿಂದ ಅರಿತುಕೊಂಡ ಶಾಸಕ ಜೆ. ಎನ್. ಗಣೇಶ್ ತಕ್ಷಣವೇ ಲೋಕೋಪಯೋಗಿ ಇಲಾಖೆಯ ಎಇಇ ಬಸಿರೆಡ್ಡಿತವರೊಂದಿಗೆ ದೂರವಾಣಿಯಲ್ಲಿ ಮಾತಾನಾಡಿ, ಕಂಪ್ಲಿ ತಾಲ್ಲೂಕಿನ ಜವುಕು ಹಾಗೂ ಜೀರಿಗನೂರು ಗ್ರಾಮಗಳ ಸಂಪರ್ಕ ಸೇತುವೆ ಸಂಪೂರ್ಣವಾಗಿ ಹಾಳಾಗಿದ್ದು, ಸೇತುವೆ ಒಂದು ವೇಳೆ ಕುಸಿದು ಬಿದ್ದರೆ, ಜೀರಿಗನೂರು ಹಾಗೂ ಇತರೆ ಗ್ರಾಮಗಳಿಗೆ ಸಂಪರ್ಕ ಕಡಿತಗೊಳ್ಳುವುದರಿಂದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ತೀವ್ರ ತೊಂದರೆಯನ್ನು ಅನುಭವಿಸಬೇಕಾಗುತ್ತದೆ ಆದ್ದರಿಂದ ಕೂಡಲೇ ತಾತ್ಕಾಲಿಕವಾಗಿ ದೊಡ್ಡ ದೊಡ್ಡ ಪೈಪ್ ಗಳನ್ನು ಹಾಕಿ ಸೇತುವೆಯನ್ನು ದುರಸ್ತಿ ಮಾಡಲು ಸೂಚಿಸಿದರಲ್ಲದೆ, ನಂತರ ಲೋಕೋಪಯೋಗಿ ಇಲಾಖೆಯ ವಿಶೇಷ ಅನುದಾನದಲ್ಲಿ ಸಂಪರ್ಕ ಸೇತುವೆಯನ್ನು ನೂತನವಾಗಿ ನಿರ್ಮಿಸಲು ಸೂಕ್ತ ಕ್ರಮಗಳನ್ನು ಕ್ಯೆಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ತಾ. ಪಂ. ಮಾಜಿ ಸದಸ್ಯ ಕೋಟೆ ಷಣ್ಮುಖ, ಕಂಪ್ಲಿ ಪುರಸಭೆ ಸದಸ್ಯ ಸಿ. ಆರ್. ಹನುಮಂತ, ಜವುಕು ಗ್ರಾಮದ ಮುಖಂಡರಾದ ರಾಜೇಗೌಡ, ಕುಮಾರಸ್ವಾಮಿ, ಎನ್.ಬಸವರಾಜ ಸೇರಿದಂತೆ ಸಾರ್ವಜನಿಕರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!