
ಚಾಮರಾಜನಗರ/ ಹನೂರು: ಪಾರದರ್ಶಕವಾಗಿ ಅಧಿಕಾರಿಗಳು ಸಾರ್ವಜನಿಕರ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸಬೇಕು ಇಲ್ಲದಿದ್ದರೆ ಜೊತೆಗೂಡಿ ಬೀದಿಗಿಳಿದು ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಕೈಜೋಡಿಸಿ ಎಂದು ಶಾಸಕ ಎಂ.ಆರ್ ಮಂಜುನಾಥ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಹನೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ವಿವಿಧ ರೈತ ಮುಖಂಡರ ಸಂಘ ಸಂಸ್ಥೆಗಳ ಮತ್ತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಹನೂರು ತಾಲೂಕಿನಲ್ಲಿ ಜ್ವಲಂತ ಸಮಸ್ಯೆಗಳನ್ನು ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮುಂದಾಗಬೇಕು ಸಾರ್ವಜನಿಕ ಸಮಸ್ಯೆಗಳನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಪಾರದರ್ಶಕವಾಗಿ ಸರ್ಕಾರಿ ಕೆಲಸವನ್ನು ನಿರ್ವಹಿಸಿದ ಇರುವುದು ಪದೇ ಪದೇ ದೂರುಗಳು ಬರುತ್ತಿದೆ ಹೀಗಾಗಿ ಎಚ್ಚೆತ್ತು ಅಧಿಕಾರಿಗಳು ನಿಯಮಾನುಸಾರ ರೈತರ ಹಾಗೂ ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ನಿರ್ವಹಿಸಿ ಇಲ್ಲದಿದ್ದರೆ ಬೀದಿಗಳಿದು ರೈತರ ಜೊತೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಂಡಳ್ಳಿ ಗ್ರಾಮದಲ್ಲಿ 25 ವರ್ಷಗಳ ಹಿಂದೆ ದಿವಂಗತ ನಾಗಪ್ಪನವರು ಆಶ್ರಯ ಬಡಾವಣೆಯನ್ನು ನಿರ್ಮಾಣ ಮಾಡಿದ್ದಾರೆ ಅದಕ್ಕೆ ಅಭಿವೃದ್ಧಿಪಡಿಸಲು ಅಲ್ಲಿನ ಅಧ್ಯಕ್ಷರ ಹಾಗೂ ಸದಸ್ಯರು ಅವರಿಗೆ ಹೆಸರು ಬರುತ್ತದೆ ಎಂದು ಅಡ್ಡಿಪಡಿಸುತ್ತಿದ್ದಾರೆ ಅಭಿವೃದ್ಧಿಪಡಿಸಿ ಅವರ ಹೆಸರನ್ನೇ ಹಾಕಿಕೊಳ್ಳಲಿ ನಮ್ಮದೇನು ಅಭ್ಯಂತರ ಇಲ್ಲ ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ನೀವು ಬನ್ನಿ ಎಂದು ರೈತರ ಜೊತೆ ತಿಳಿಸಿದರು.
ಆಹಾರ ಇಲಾಖೆಯ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದಾಗ ತಾಲೂಕಿನಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ವಿತರಣೆ ಮಾಡಲಾಗುತ್ತಿದೆ ಕ್ರಮ ಕೈಗೊಳ್ಳಿ ಜೊತೆಗೆ ರೇಷನ್ ಕಾರ್ಡ್ ಗಳನ್ನು ಮಾಡದೇ ಇರುವುದರಿಂದ ಜನಸಾಮಾನ್ಯರಿಗೆ ತೊಂದರೆ ಆಗಿದೆ ಬಿಪಿಎಲ್ ಎಪಿಎಲ್ ಕಾರ್ಡುಗಳನ್ನು ಪರಿಷ್ಕಾರ ಮಾಡಲು ಕ್ರಮ ಕೈಗೊಳ್ಳಿ ಎಂದು ರೈತರು ಮನವಿ ಮಾಡಿದರು ಇದಕ್ಕೆ ಸ್ಪಂದಿಸಿದ ಜಿಲ್ಲಾ ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಸುಂಧರ ಜಿಲ್ಲೆಯ ಹಾಗೂ ತಾಲೂಕಿನಲ್ಲಿ ಸರ್ಕಾರ ನೀಡುತ್ತಿರುವ ಪಡಿತರವನ್ನು ನಿಗದಿತ ಸಮಯದಲ್ಲಿ ವಿತರಣೆ ಮಾಡಲು ಸೂಚನೆ ನೀಡಲಾಗಿದೆ ಒಂದೆರಡು ಬಾರಿ ಪಡಿತರ ಅಂಗಡಿಗಳಿಗೆ ಕೈ ಸೇರಲು ವಿಳಂಬವಾದಾಗ ತೊಂದರೆ ಆಗಿರಬಹುದು ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ತಾಲೂಕಿನ 25 ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ವ್ಯವಸ್ಥೆ ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲ ತೊಂದರೆಯಾಗುತ್ತಿದೆ ಹಾಗೂ ರೈತರು ದನದ ಕೊಟ್ಟಿಗೆಗಳನ್ನು ನಿರ್ಮಾಣ ಮಾಡಲು ಹೊರಟಿರುವ ರೈತರಿಗೆ ಕಳೆದ ಮೂರು ವರ್ಷಗಳಿಂದ ಸಿಗಬೇಕಾಗಿರುವ ಹಣ ನೀಡದೆ ತಾಲೂಕು ಪಂಚಾಯಿತಿ ವತಿಯಿಂದ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ವಿಳಂಬ ಧೋರಣೆಯನ್ನು ಅಧಿಕಾರಿಗಳು ಅನುಸರಿಸುತ್ತಿದ್ದಾರೆ ಜೊತೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ಸಭೆಗಳನ್ನು ಸಹ ನಾಗರಿಕರಿಗೆ ತಿಳಿಯದೆ ನಿರ್ಮಾಣ ಸಾರವಿಲ್ಲದೆ ಸಭೆಗಳನ್ನು ನಡೆಸಿ ಬಂದಿರುವ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹಲವಾರು ದೂರುಗಳು ಬಂದವು ಇದಕ್ಕೆ ಪೂರಕವಾಗಿ ಉತ್ತರಿಸಿದ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರಾದ ರೈತರಿಗೆ ಸಭೆಯಲ್ಲಿ ಸಮರ್ಪಕ ಉತ್ತರ ನೀಡದೇ ಇರುವುದರಿಂದ ರೈತರಿಂದ ಹಾಗೂ ಶಾಸಕರಿಂದ ತರಾಟೆಗೆ ಒಳಗಾದರು.
ರೈತ ಮುಖಂಡವನ್ನು ಪ್ರಕಾಶ್ ಮಾತನಾಡಿ ತಾಲೂಕಿನ ಜಿಲ್ಲೆಯ ಪಡಿತರ ವಿತರಣೆ ಅಂಗಡಿಗಳಲ್ಲಿ ರಾಗಿ ಅಕ್ಕಿ ಜೊತೆಗೆ ಸಿರಿ ಧಾನ್ಯಗಳನ್ನು ಸಹ ಜನಸಾಮಾನ್ಯರಿಗೆ ವಿತರಣೆ ಮಾಡಲು ಕ್ರಮ ಕೈಗೊಳ್ಳಿ ಮಲೆ ಮಹದೇಶ್ವರ ಬೆಟ್ಟದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಇತ್ತೀಚೆಗೆ ಸಿರಿಧಾನ್ಯಗಳಿಂದ ಆಹಾರ ಪದಾರ್ಥಗಳನ್ನು ವಿತರಣೆ ಮಾಡುತ್ತಿರುವುದು ಮಧುಮೇಹಿಗಳಿಗೆ ಅನುಕೂಲದಾಯಕವಾಗಿದೆ ಸರ್ಕಾರ ನೀಡುತ್ತಿರುವ ಅನುದಾನಗಳನ್ನು ಸದ್ಬಳಕೆ ಮಾಡಿಕೊಳ್ಳಲು ಅಧಿಕಾರಿಗಳು ಇಚ್ಛಾಶಕ್ತಿ ಕೊರತೆಯಿಂದ ಕೆಲಸ ನಿರ್ವಹಿಸದೆ ಇರುವುದರಿಂದ ಅಂತಹ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಿ ಎಂದು ಒತ್ತಾಯಿಸಿದರು.
ತಾಲೂಕು ಅಧ್ಯಕ್ಷ ಅಮ್ಜಾದ್ ಖಾನ್ ಮಾತನಾಡಿ ಅಜ್ಜಿಪುರ ಕುರುಬರದೊಡ್ಡಿ ಗ್ರಾಮದಲ್ಲಿ ಮಕ್ಕಳಿಬ್ಬರು ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಇದರ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬರದೆ ನಿರ್ಲಕ್ಷ್ಯ ವಹಿಸಿದ್ದಾರೆ ಸರ್ಕಾರದಿಂದ ನೀಡುತ್ತಿರುವ ಕೃಷಿ ಹೊಂಡ ಗಳಿಗೆ ಸುತ್ತಲೂ ತಂತಿ ಮೇಲೆ ಹಾಕಲು ಕ್ರಮ ಕೈಗೊಳ್ಳಿ ಮುಂದೆ ಇಂತಹ ಘಟನೆಗಳು ಜರುಗದಂತೆ ಕ್ರಮ ವಹಿಸಲು ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಚೈತ್ರಾ, ಕೃಷಿ ಇಲಾಖೆ ಉಪ ನಿರ್ದೇಶಕರಾದ ಸುಷ್ಮಾ, ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ವಸುಂದರ ಹೆಗ್ಡೆ, ಹಿರಿಯ ಸಹಾಯಕ ತೋಟಗಾರಿಕೆ ಉಪನಿರ್ದೇಶಕರಾದ ಶಿವಪ್ರಸಾದ್,
ಅರಣ್ಯ ಸಂರಕ್ಷಣಾಧಿಕಾರಿ ವಿರಾಜ್ ಶ್ರೀಕಾಂತ್ ಹೊಸೂರು, ಚೆಸ್ಕಾಂ ಎಇಇ ರಂಗಸ್ವಾಮಿ, ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರಾದ ರಾಧಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ , ರಾಜಸ್ವ ನಿರೀಕ್ಷರಾದ ಶಿವಕುಮಾರ್, ಪೋಲಿಸ್ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕಿನ ವಿವಿಧ ರೈತ ಸಂಘಟನೆಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್



















