ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ತವ್ಯ ಲೋಪದ ಬಗ್ಗೆ ಪ್ರತಿಭಟನೆ

ಶಿವಮೊಗ್ಗ: ಮಹಾನಗರ ಪಾಲಿಕೆಯ ಅಧಿಕಾರಿಗಳ ಕರ್ಮಕಾಂಡ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ
ಶಿವಮೊಗ್ಗ ನಗರದ ಜೆ ಎಚ್ ಪಟೇಲ್ ಬಡಾವಣೆಯಲ್ಲಿನ ಹಾಲಿ ಚಾಲನೆಯಲ್ಲಿರುವ ಒಳಚರಂಡಿ ಕೊಳವೆ ಮಾರ್ಗಗಳನ್ನು ನಾರ್ಧನ್ ಔಟ್ ಪಾಲ್ ಗೆ ಲಿಂಕ್ ಮಾಡುವ ಕಾಮಗಾರಿಯನ್ನು ತರಾತುರಿಯಲ್ಲಿ ಪ್ರಾರಂಭ ಮಾಡಿದ್ದು ಅಂದಾಜು ವೆಚ್ಚ 83.70, ಲಕ್ಷದ ಕಾಮಗಾರಿಗೆ ನಿಯಮದ ಪ್ರಕಾರ ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಅನುಮತಿಯನ್ನು ತೆಗೆದುಕೊಂಡು ಕಾಮಗಾರಿಯನ್ನು ಪ್ರಾರಂಭಿಸಬೇಕಿತ್ತು, ಆದರೆ ತರಾತುರಿಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ತುಂಗಾ ಮೇಲ್ದಂಡೆ ಯೋಜನಾ ವಿಭಾಗದಿಂದ ಮೇಲ್ಕಂಡ ಕಾಮಗಾರಿಗೆ ಸಂಬಂಧಿಸಿದಂತೆ ನಿರಾಕ್ಷೇಪಣಾ ಪತ್ರ ಪಡೆಯದೆ ಕಾಮಗಾರಿ ಮಾಡಿರುವುದು ಕರ್ತವ್ಯ ಲೋಪವಾಗಿದೆ ಹಾಗೆಯೇ ತುಂಗಾ ಮೇಲ್ದಂಡೆ ಯೋಜನೆ ವಿಭಾಗದಿಂದ ಅನುಮತಿ ಪತ್ರ ಸಿಗುವ ಮುನ್ನವೇ ತಮ್ಮ ಇಲಾಖೆಯ ಅಧಿಕಾರಿಗಳು ಈ ಕಾಮಗಾರಿಗೆ ಸಂಬಂಧಿಸಿದಂತೆ ಕಾರ್ಯ ಆದೇಶ ನೀಡಿದ್ದಾರೆ ಇದು ಕೂಡ ಕರ್ತವ್ಯ ಲೋಪವಾಗಿದೆ
ಉದ್ದೇಶ ಒಳ್ಳೆಯದಾಗಿದ್ದರು ಕೂಡಾ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸುವಾಗ ನಿಯಮಗಳನ್ನು ಪಾಲಿಸದೆ ಕಾಮಗಾರಿಯನ್ನು ಪ್ರಾರಂಭ ಮಾಡುವುದು ಕೂಡ ಕರ್ತವ್ಯ ಲೋಪವಾಗುತ್ತದೆ ಹಾಗೆಯೇ ತರಾತುರಿಯಲ್ಲಿ ಕಾಮಗಾರಿ ಪ್ರಾರಂಭ ಮಾಡುವುದು ಹಲವು ಅನುಮಾನಗಳನ್ನು ಹುಟ್ಟಿಸುತ್ತದೆ ಆದ್ದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವುಗಳು ಸಂಬಂಧಿಸಿದ ಅನಧಿಕೃತ ಕಾಮಗಾರಿಗಳನ್ನು ತೆಗೆಸಬೇಕು ಅನುಮತಿ ಸಿಗುವವರೆಗೂ ಕೆಲಸ ಮಾಡದಂತೆ ನೋಡಿಕೊಳ್ಳಬೇಕು ತರಾತುರಿಯಲ್ಲಿ ಕಾರ್ಯ ಪ್ರಾರಂಭಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಮಹಾನಗರ ಪಾಲಿಕೆ ಇಂಜಿನಿಯರ್ ಸಹಾಯಕ ಕಾರ್ಯಪಾಲಕ ಅಭಿಯಂತರು ಹಾಗೂ ಮಹಾನಗರ ಪಾಲಿಕೆಯ ಕಾರ್ಯ ಪಾಲಕ ಅಭಿಯಂತರದ ವಿರುದ್ಧ ದೂರು ದಾಖಲಿಸಿಕೊಂಡು ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ತಮ್ಮಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಆಗ್ರಹಿಸುತ್ತದೆ ತಾವು ಯಾವುದೇ ರೀತಿಯ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟದ ಮುಖಾಂತರ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಲಾಗುವುದು ಎಂದು ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ ಎಸ್ ತಿಳಿಸಿದ್ದಾರೆ. ಈ ಕರ್ತವ್ಯ ಲೋಪ ವಿರುದ್ಧವು ಸಹ ಕಾರ್ಯಪಾಲಕ ಅಭಿಯಂತರು ತುಂಗಾ ಮೇಲ್ದಂಡೆ ಯೋಜನೆಯ ವಿಭಾಗಕ್ಕೂ ಸಹ ತಮ್ಮ ವ್ಯಾಪ್ತಿಗೆ ಒಳಪಡುವ ಜಾಗದಲ್ಲಿ ನಿರಕ್ಷೇಪಣಾ ಪತ್ರವನ್ನು ಪಡೆಯದೆ ಕಾರ್ಯನಿರ್ವಹಿಸಿದವರ ವಿರುದ್ಧ ಮಹಾನಗರ ಪಾಲಿಕೆಯ ಗುತ್ತಿಗೆದಾರ ಇಂಜಿನಿಯರ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹಾಗೂ ಮಹಾನಗರ ಪಾಲಿಕೆಯ ಕಾರ್ಯ ಪಾಲಕ ಅಭಿಯಂತರದ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಅವರಲ್ಲೂ ಸಹ ಒಂದು ಮನವಿಯನ್ನು ಸಲ್ಲಿಸಲಾಯಿತು ಇಲ್ಲದಿದ್ದಲ್ಲಿ ಮುಂದಿನ ದಿನ ತುಂಗಾ ಮೇಲ್ದಂಡೆ ಯೋಜನೆಯ ಕಚೇರಿಗೆ ಮುತ್ತಿಗೆಯನ್ನು ಹಾಕಲಾಗುವುದು ಎಂದು ಎಚ್ಚರಿಸಲಾಯಿತು.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ನಗರಾಧ್ಯಕ್ಷರಾದ ಜೀವನ ಮಹಮ್ಮದ್ ರಫಿ ಯುವ ಘಟಕ ಅಧ್ಯಕ್ಷರಾದ ಸಂತೋಷ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಎನ್, ಮಾಲತೇಶ್, ಪ್ರವೀಣ್ ಕುಮಾರ್ ಗ್ರಾಮಾಂತರ ಅಧ್ಯಕ್ಷರಾದ ಮಂಜುನಾಥ್ ಹೆಚ್ ಎನ್ ನಾಗರಾಜ್ ಮುಂತಾದ ಪದಾಧಿಕಾರಿಗಳು ಭಾಗವಹಿಸಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!