ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಾರತ ವಿವಿಧತೆಯಲ್ಲಿ ಏಕತೆಯಿರುವ ದೇಶ :ಡಾ. ಗಣಪತಿ ಲಮಾಣಿ

ಭಾರತ ವಿವಿಧತೆಯಲ್ಲಿ ಏಕತೆಯಿರುವ ದೇಶ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಚಾರ್ಯ ಡಾ. ಗಣಪತಿ ಲಮಾಣಿ ಯವರು ಹೇಳಿದರು.

ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಎನ್. ಎಸ್. ಎಸ್ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ನಮ್ಮ ದೇಶ ಹಳ್ಳಿಗಳಿಂದ ಕೂಡಿದ ದೇಶವಾಗಿದೆ. ಕೈಗಾರೀಕರಣದಿಂದ ಹಳ್ಳಿಗಳಿಂದ ಜನರು ನಗರಗಳಿಗೆ ವಲಸೆ ಹೊಗುತ್ತಿದ್ದಾರೆ. ಸಮಾಜ ನಿಂತ ನೀರಲ್ಲ. ನೀವು ಬೇರೆಯವರಲ್ಲಿ ಸ್ವಚ್ಛತೆಯ ಮನೋಭಾವನೆ ಬೆಳೆಸಿಕೊಳ್ಳಬೇಕು. ಎನ್. ಎಸ್. ಎಸ್ ನಿಂದ ಪಡೆದ ಜ್ಞಾನ ನಿಮ್ಮ ಜೀವನಕ್ಕೆ ಬಹಳ ಅನುಕೂಲ ಆಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಪ್ರೇಮಿ ಬಿ. ಜಿ. ಕರಿಗಾರ ಅವರು ಮಾತನಾಡುತ್ತ ರಸ್ತೆಯಲ್ಲಿ ಕಸ ಎಸೆಯಬಾರದು. ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಉನ್ನತ ನಾಯಕರನ್ನು ನಾವು ಅನುಕರಣೆ ಮಾಡಬೇಕು. ಕಾಲೇಜಿನಲ್ಲಿ ನೀತಿ ಪಾಠಗಳನ್ನು ಕಲಿಯಬೇಕು. ಇವು ಜೀವನದಲ್ಲಿ ಉಪಯೋಗವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ಭೋಧಕರಾದ ಡಾ. ಪ್ರಡೀಪ್ ಕುಮಾರ ಅವರು ಎನ್. ಎಸ್. ಎಸ್ ಘಟಕವು ಜೀವನದ ಮೌಲ್ಯಗಳನ್ನು ಕಲಿಸುತ್ತದೆ. ನಾನು ನನಗೋಸ್ಕರ ಅಲ್ಲ. ಸಮಾಜಕ್ಕಾಗಿ ಎಂಬ ಸೇವಾ ಮನೋಭಾವನೆ ಇರಬೇಕು. ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಇದು ನಾಯಕತ್ವದ ಗುಣಗಳನ್ನು ಕಲಿಸುತ್ತದೆ.
ಉಲ್ಲಾಸದ ಮುಖ ಉತ್ಸಾಹದ ಹೃದಯ ಕ್ರೀಡೆಯಿಂದ ಮಾತ್ರ ಸಿಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಮಯ್ಯ ಅವರು ಮಾತನಾಡುತ್ತ ವಿದ್ಯಾರ್ಥಿನಿಯರು ಮನೆ, ಕಾಲೇಜು ಮತ್ತು ಮನಸನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ದೇಶದ ಅಭಿವೃದ್ಧಿಗಾಗಿ ಎಲ್ಲರೂ ಶ್ರಮ ಪಡಬೇಕು ಎಂದು ತಿಳಿಸುದರು.
ಪ್ರಾಸ್ತಾವಿಕವಾಗಿ ಕಾಲೇಜಿನ ಎನ್. ಎಸ್. ಎಸ್ ಘಟಕದ ಸಂಚಾಲಕ ಡಾ. ನರಸಿಂಹ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶುಭಾ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಗೌರಿ ವಂದನಾರ್ಪಣೆ ಮಾಡಿದರು. ನಿರೂಪಣೆಯನ್ನು ಯಲ್ಲಮ್ಮ ನಡೆಸಿಕೊಟ್ಟರು. ಮೇರಿ ಮತ್ತು ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಪ್ರೇಮ ಸ್ವಾಗತಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!