
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 30/09/2025 ರಂದು ಬೆಳಗ್ಗೆ ಅಥಣಿಯಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾ ಭೂಮಿಗೆ ತೆರಳುವ ಐದು ಬಸ್ಸುಗಳಿಗೆ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ್ ಸವದಿ ಅವರಿಂದ ಡಾ|| ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಮಾಡಿ, ಧ್ವಜ ಬೀಸುವ ಮೂಲಕ ಚಾಲನೆ ನೀಡಿದರು.
ಇದೇ ವೇಳೆ ಅಥಣಿ ಕಾಂಗ್ರೆಸ್ ಬ್ಲಾಕ್ ಕಮಿಟಿ ಅಧ್ಯಕ್ಷರಾದ ಸಿದ್ದಾರ್ಥ್ ಸಿಂಗೆ, ಅಥಣಿ ಪುರಸಭೆಯ ಸದಸ್ಯರಾದ ಕಲ್ಲೇಶ್ ಮಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ದೀಕ್ಷಾಭೂಮಿಗೆ ತೆರಳುವ ಯಾತ್ರಿಗಳು ಉಪಸ್ಥಿತರಿದ್ದರು.
ವರದಿ. ವಿಠ್ಠಲ ಖೋಕಾಟೆ




















