
ಮೈಸೂರು ದಸರಾ ಮಹೋತ್ಸವದ ಅಂಗವಾಗಿ 40,000ಕ್ಕೂ ಹೆಚ್ಚು ಹೂಗಳಿಂದ ಅಲಂಕಾರಗೊಂಡ ಫಲ-ಪುಷ್ಪ ಪ್ರದರ್ಶನ ನಡೆಯುತ್ತಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ, ಲಿಂಗಬುದಿ ಸಸ್ಯ ಕಾಶಿ ಉದ್ಯಾನವನದಲ್ಲಿ ಹಮ್ಮಿಕೊಂಡಿರುವ ಫಲ-ಪುಷ್ಪ ಪ್ರದರ್ಶನವು ಸದ್ಯ ನಗರದಲ್ಲಿಯೇ ಪ್ರಮುಖ ಆಕರ್ಷಣೆಯಾಗಿ ಪರಿಣಮಿಸಿದೆ. ಸುಮಾರು 40,000ಕ್ಕೂ ಹೆಚ್ಚು ಬಣ್ಣ ಬಣ್ಣದ ಹೂವುಗಳ ಅಲಂಕಾರದಿಂದ ಹೊಳೆಯುತ್ತಿರುವ ಈ ಉದ್ಯಾನವನದಲ್ಲಿ, ವಿಭಿನ್ನ ವಿನ್ಯಾಸಗಳು ಹಾಗೂ ಕಲಾತ್ಮಕ ಶಿಲ್ಪಗಳು ಸಂದರ್ಶಕರ ಮನಸೆಳೆಯುತ್ತಿವೆ.
ಈ ಬಾರಿಯ ದಸರಾ ಫಲಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ನಗರದ ಕುಪ್ಪಣ್ಣ ಪಾರ್ಕ್ನಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ಸಿ. ಎಂ., ಸಚಿವರೊಂದಿಗೆ ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ವರದಿ ಜೆ. ಪ್ರದೀಪ್




















