
ದಿನಾಂಕ 05/10/2025 ರಂದು ಬೆಳಗ್ಗೆ 11 ಗಂಟೆಗೆ ಅಥಣಿಯ ಚೈನಿ ಆಸ್ಪತ್ರೆಯ ಹತ್ತಿರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ಕಾರ್ಯಾಲಯವನ್ನು ಉದ್ಘಾಟನೆ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಥಣಿ ಹಾಗೂ ಕಾಗವಾಡ ತಾಲೂಕ ಅಧ್ಯಕ್ಷರಾದ ಅಲ್ಲಾಹುದ್ದೀನ್ ಶೇಕ್ ಮಾಧ್ಯಮ ಮಿತ್ರರಿಗೆ ತಿಳಿಸಿದರು.
ಈ ಕಾರ್ಯಕ್ರಮ ಉದ್ಘಾಟನೆಯನ್ನು ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ್ ಸವದಿ ಹಾಗೂ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರು ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಭರಮಗೌಡ (ರಾಜು) ಕಾಗೆ ಅವರು ಉದ್ಘಾಟಿಸಲಿದ್ದಾರೆ ಹಾಗೂ ಇನ್ನು ಜನ ಪ್ರತಿನಿಧಿಗಳು ಮತ್ತು ತಾಲೂಕ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅಲ್ಲಾವುದ್ದೀನ್ ಶೇಕ್ ಅವರು ಮಾಧ್ಯಮದೊಂದಿಗೆ ಹೇಳಿಕೊಂಡರು.
ಅದಲ್ಲದೆ ಈ ಕಾರ್ಯಕ್ರಮಕ್ಕೆ ರೈತ ಮುಖಂಡರು, ಸಮಾಜ ಸೇವಕರು, ನಾಗರಿಕರು ಹಾಗೂ ತಾಲೂಕಿನ ಮಾಧ್ಯಮ ಮಿತ್ರರು ಕಾರ್ಯಕ್ರಮಕ್ಕೆ ಬಂದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಾಲೂಕ ಅಧ್ಯಕ್ಷರು ಮನವಿಯನ್ನು ಮಾಡಿದರು.
ವರದಿ. ವಿಠ್ಠಲ ಖೋಕಾಟೆ



















