ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಣೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಆಚರಿಸಲಾಯಿತು.

ಮುಖ್ಯಶಿಕ್ಷಕರಾದ ಎನ್. ಆರ್. ಠಕ್ಕಾಯಿ ಮಾತನಾಡಿ ಸತ್ಯ ಮತ್ತು ಅಹಿಂಸೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಮಹಾತ್ಮರಾದ ಗಾಂಧೀಜಿ ಹಾಗೂ ದಕ್ಷತೆ, ಪ್ರಾಮಾಣಿಕತೆ ಮತ್ತು ಸರಳತೆಗೆ ಬದ್ದರಾಗಿ ಅಜರಾಮರರಾದ ಶಾಸ್ತ್ರೀಜಿ ಅವರ ಆದರ್ಶ ಬದುಕು ನಮಗೆಲ್ಲ ಮಾದರಿಯಾಗಲಿ ಎಂದು ಹೇಳಿದರು. ದೇಶ ಕಂಡ ಇಬ್ಬರು ಅಪ್ರತಿಮ ಮಹಾನಾಯಕರ ಜೀವನ, ಸಂದೇಶಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಎಂದು ಅವರು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳಾದ ಸಾನಿಕಾ ಕುಲಕರ್ಣಿ, ಭಾಗ್ಯಶ್ರೀ ಬಡಿಗೇರ, ಕಲ್ಮೇಶ ಗುಡ್ಡದ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿನಾಯಕ ಬಡಿಗೇರ, ಸದಸ್ಯರಾದ ರಾಮು ಮೆಕ್ಕೇದ, ಶಿಕ್ಷಕರಾದ ಜಗದೀಶ ನರಿ, ಶಿವಾನಂದ ಬಳಿಗಾರ, ಹೇಮಲತಾ ಪುರಾಣಿಕ, ವೀರೇಂದ್ರ ಪಾಟೀಲ, ಮಂಜುಳಾ ಕಾಳಿ, ಸಂತೋಷ ಸಾಳುಂಕೆ, ಶಾಲಾ ಸಿಬ್ಬಂದಿಗಳಾದ ಜ್ಯೋತಿ ಅಳಗೋಡಿ, ಮಹಾದೇವಿ ಸೊಗಲದ, ಗಂಗವ್ವ ಅಳಗೋಡಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ : ಉಮೇಶ ಗೌಡರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!