ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಟೈಮ್ ರೆಕಾರ್ಡ್, ಎಂಟನೇ ಬಾರಿಗೆ ಪುಷ್ಪಾರ್ಚನೆ ಮಾಡಿದ ಸಿ.ಎಂ ಸಿದ್ದರಾಮಯ್ಯ

ಮೈಸೂರು ದಸರಾ ಅದ್ದೂರಿಯಾಗಿ ಜರುಗುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ನೆರವೇರಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ವರ್ಷ ಮೈಸೂರಿನಲ್ಲಿ ದಸರಾ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ. ವಿಶ್ವವಿಖ್ಯಾತ ದಸರಾ ಮಹೋತ್ಸವವು ವರ್ಷಕ್ಕೊಮ್ಮೆ ನಡೆಯುವ ನಾಡಹಬ್ಬವಾಗಿದ್ದು, ಇದರ ಜಂಬೂಸವಾರಿ ಮೆರವಣಿಗೆ ನಡೆಯಿತು. ನಂದಿ ಪೂಜೆಯ ನಂತರ ಮೆರವಣಿಗೆ ಪ್ರಾರಂಭವಾಗಿ, ಅಂಬಾರಿ ಮೇಲೆ ಚಾಮುಂಡೇಶ್ವರಿ ತಾಯಿಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು. ಈ ವೇಳೆ ತಮ್ಮ ಮುಖ್ಯಮಂತ್ರಿ ಅವಧಿಯಲ್ಲಿ ಏಳು-ಎಂಟು ಬಾರಿ ದಸರಾವನ್ನು ಉದ್ಘಾಟಿಸಿದ ವಿಷಯವನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಇದು ಆಲ್ ಟೈಮ್ ರೆಕಾರ್ಡ್ ಆಗಿರಬಹುದು, ಆದರೆ ತಮಗೆ ದಾಖಲೆ ನೋಡುವ ಆಸಕ್ತಿಯಿಲ್ಲ ಎಂದರು. ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೂ ಮತ್ತು ಈಗ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಮೇಲೆಯೂ ದಸರಾ ಉತ್ಸವಗಳಲ್ಲಿ ಪಾಲ್ಗೊಂಡಿರುವುದನ್ನು ಅವರು ಸ್ಮರಿಸಿದರು. ಜನರ ಆಶೀರ್ವಾದದಿಂದ ಇಷ್ಟು ವರ್ಷ ಮುಖ್ಯಮಂತ್ರಿಯಾಗಿ ದಸರಾ ಮಹೋತ್ಸವವನ್ನು ಆಚರಿಸುವ ಸೌಭಾಗ್ಯ ದೊರೆತಿದೆ. ಇದು ನಾಡಹಬ್ಬ, ಜನರ ಹಬ್ಬ. ಜನರು ಖುಷಿಯಾದಾಗ ಸರ್ಕಾರಕ್ಕೂ ಖುಷಿಯಾಗುತ್ತದೆ, ಜನರು ಹೆಚ್ಚು ಹೆಚ್ಚು ಭಾಗವಹಿಸುವುದರಿಂದ ಸರ್ಕಾರವೂ ಸಂತಸಪಡುತ್ತದೆ ಎಂದು ಹೇಳಿದರು.

ವರದಿ ಜೆ. ಪ್ರದೀಪ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!