ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿರಾಶ್ರಿತರ ಕೇಂದ್ರದ 155 ನಿರ್ಗತಿಕರಿಗೆ ಉಚಿತ ಕ್ಷೌರ ಸೇವೆ ಸಲ್ಲಿಸಿದ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್

ಕಲಬುರಗಿ/ಚಿತ್ತಾಪುರ : ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಗಳು ಅವರ ಸಮ್ಮುಖದಲ್ಲಿ ಸತತವಾಗಿ ಆರು ವರ್ಷಗಳಿಂದ ಕರ್ನಾಟಕ ಚೇತನ ನಾಡಶ್ರೀ ರತ್ನ ನಾಲವಾರದ ಪರಮ ಪೂಜ್ಯ ಶ್ರೀ ಷ.ಬ್ರ.ಡಾ.ಸಿದ್ದ ತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ 61ನೇ ವರ್ಷದ ಹುಟ್ಟು ಹಬ್ಬದ ನಿಮಿತ್ತವಾಗಿ ಕಲಬುರಗಿ ಜಿಲ್ಲೆಯ ಬಿದ್ದಾಪೂರ ಕಾಲೋನಿಯ ನಿರಾಶ್ರಿತರ (ನಿರ್ಗತಿಕರ) ಕೇಂದ್ರದಲ್ಲಿರುವ 155 ಕ್ಕೊ ಹೆಚ್ಚು ನಿರಾಶ್ರಿತರಿಗೆ ಉಚಿತ ಕ್ಷೌರ ಸೇವೆ ಸಲ್ಲಿಸಲಾಯಿತು. ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಸಮಾಜದ ಸಂಘಟನೆ ಜೊತೆಗೆ ಈ ರೀತಿಯ ವಿಭಿನ್ನ ಸೇವೆ ಮಾಡುವುದರ ಮೂಲಕ ಸಮಾಜಕ್ಕೆ ಮತ್ತು ಸಾವಿರಾರು ಅನಾಥರಿಗೆ ಉಚಿತವಾಗಿ ಕ್ಷೌರ ಸೇವೆ ಸಲ್ಲಿಸಿದ ಸಲುವಾಗಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರಿಗೆ ಅನೇಕ ಸಂಘ ಸಂಸ್ಥೆಗಳು ರಾಜ್ಯ ಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ 35 ಕ್ಕೂ ಹೆಚ್ಚು ಪ್ರಶಸ್ತಿಗಳು ಲಭಿಸಿವೆ ಎಂದು ಶ್ರೀ ಬಾಲ ಬ್ರಹ್ಮಚಾರಿ ರಾಜಶಿವಯೋಗಿ ಮಹಾಸ್ವಾಮಿಗಳು ಶಹಾಬಾದ ಪೂಜ್ಯರು ಉಚಿತ ಕ್ಷೌರ ಸೇವೆಗೆ ಚಾಲನೆ ನೀಡುವ ಮೂಲಕ ಪೂಜ್ಯರು ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜದ ಹಿರಿಯರು ಜಿಲ್ಲಾ ಗೌರವಾಧ್ಯಕ್ಷರು ಬಸವರಾಜ ಹಡಪದ ಸುಗೂರ ಎನ್, ಹಾಗೂ ರಾಜ್ಯ ಹಡಪದ ಅಪ್ಪಣ್ಣ ಸಮಾಜದ ಮಾಜಿ ಸಂಘಟನಾ ಕಾರ್ಯದರ್ಶಿ ಬಸವರಾಜ ಹಳ್ಳಿ ಶಹಾಬಾದ, ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷರು ಭಗವಂತ ಸಹ ಶಿಕ್ಷಕರು ಹೊನ್ನಕಿರಣಗಿ, ಮತ್ತು ಇಂದಿನ ಸಮಾಜದಲ್ಲಿ ಹಿರಿಯರನ್ನು ಗೌರವಿಸುವುದು ಕಡಿಮೆಯಾಗಿದೆ. ಇಳಿವಯಸ್ಸಿನಲ್ಲಿ ಹಿರಿಯರನ್ನು ಕುಟುಂಬ ಸದಸ್ಯರು ಮುತುವರ್ಜಿಯಿಂದ ಆರೈಕೆ ಮಾಡಬೇಕಿದೆ. ಉತ್ತಮ ಆಹಾರ, ಶುಚಿತ್ವ ಹಾಗೂ ಆರೋಗ್ಯದ ಬಗ್ಗೆ ನಾವೆಲ್ಲರೂ ಕಾಳಜಿ ವಹಿಸುವುದು ಅಗತ್ಯವಾಗಿದೆ. ಉತ್ತಮ ಸಮಾಜಕ್ಕಾಗಿ ಉತ್ತಮ ನಾಗರಿಕರಾಗಿ ಅಜ್ಜ ಅಜ್ಜಿಯರ ಸೇವೆ ಮಾಡಲು ಯುವಕರು ಮುಂದಾಗಬೇಕು ಆಗ ಯಾರೂ ಸಹ ಈ ರೀತಿಯ ನಿರ್ಗತಿಕರ ಕೇಂದ್ರಕ್ಕೆ ಅನಾಥ ಆಶ್ರಮಕ್ಕೆ ಬರುವ ಸಾಧ್ಯತೆ ಇರುವುದಿಲ್ಲ ಎಂದು ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಹಡಪದ ನೀಲೂರ ತಿಳಿಸಿದರು. ಜಿಲ್ಲಾ ಉಪಾಧ್ಯಕ್ಷರು ರುದ್ರಮಣಿ ಅಪ್ಪಣ್ಣ ಬಟಗೇರಾ, ನಿರಾಶ್ರಿತರ ಕೇಂದ್ರದ ಪ್ರಕಾಶ ಪವ್ಹಾರ. ಮತ್ತು ವಿರೇಶ ಕಲಬುರಗಿ ಹಾಗೂ ಸಮಾಜದ ಹಿರಿಯ ಮುಖಂಡರು ನಾಗಣ್ಣ ಹಡಪದ ಮುತ್ತಕೋಡ್ ಶಹಾಬಾದ, ಶಂಭುಲಿಂಗ ಹಡಪದ ನಗರ ಘಟಕ ಕಾರ್ಯದರ್ಶಿ.ಕಲಬುರಗಿ ತಾಲೂಕಾಧ್ಯಕ್ಷ ಚಂದ್ರಶೇಖರ ಹಡಪದ ತೊನಸನಹಳ್ಳಿ.ತಾಲೂಕು ಕಾರ್ಯದರ್ಶಿ ವಿನೋದ ಹಡಪದ ಅಂಬಲಗಾ,ಮಲ್ಲಿಕಾರ್ಜುನ ಬೆಳಗುಪ್ಪಾ. ಅರುಣ ಹಡಪದ ಗೊಬ್ಬೂರ ಬಿ,ಮಹಾದೇವ ಹಡಪದ ವಡಗೇರಿ ರಾವೂರ, ಮಲ್ಲಿಕಾರ್ಜುನ ಹಡಪದ ಮದರಗಾಂವ್ ವಾಡಿ, ರಮೇಶ್ ಕರಾರಿ, ಅಂಕುಶ ಹಡಪದ ಶಿರಡೂಣ. ಈ ಕಾಯಕ ಬಂಧುಗಳು ಈ ಉಚಿತ ಕ್ಷೌರ ಸೇವೆಯಲ್ಲಿ ಭಾಗವಹಿಸಿ ಸೇವೆ ಸಲ್ಲಿಸಿದರು ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!