ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಿ. ಎಸ್. ಸಜ್ಜನ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಬಾಗಲಕೋಟೆ : ಪ್ರಜಾತಂತ್ರದ ಮೌಲ್ಯಗಳನ್ನು ಮಹರ್ಷಿ ವಾಲ್ಮೀಕಿಯವರ ರಾಮಾಯಣ ಮಹಾಕಾವ್ಯದಲ್ಲಿ ಕಾಣುತ್ತೇವೆ. ಕವಿಋಷಿ ವಾಲ್ಮೀಕಿಯವರ ಜ್ಞಾನ, ವಿದ್ವತ್ತಿನ ಚಿಂತನೆಗಳು ಭಾರತದ ಆಧ್ಯಾತ್ಮಿಕ ಮೌಲ್ಯಗಳನ್ನು ಶ್ರೀಮಂತಗೊಳಸಿವೆ. ಮಹರ್ಷಿ ವಾಲ್ಮೀಕಿಯವರು ರಾಮಾಯಣದ ಮೂಲಕ ಶ್ರೀರಾಮನ ಚರಿತ್ರೆಯನ್ನು, ಆದರ್ಶಗಳನ್ನು ಜಗತ್ತಿಗೆ ತಿಳಿಸಿದ್ದಾರೆ. ವಿದ್ಯಾರ್ಥಿಗಳು ವಾಲ್ಮೀಕಿಯವರ ತತ್ವಾದರ್ಶಗಳನ್ನು ಅರಿತು ನಡೆಯಬೇಕು ಎಂದು ಬೇವೂರಿನ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಇತಿಹಾಸ ಉಪನ್ಯಾಸಕ ಐ.ಕ್ಯೂ.ಎ.ಸಿ ಘಟಕದ ಮುಖ್ಯಸ್ಥ ಡಾ.ಎ.ಎಮ್. ಗೊರಚಿಕ್ಕನವರ ಹೇಳಿದರು. ಜಿಲ್ಲೆಯ ಬೇವೂರನ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್. ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಭಾವಚಿತ್ರಕ್ಕೆ ಪೂಜೆ ನೇರವೇರಿಸಿ ಪುಷ್ಪ ನಮನ ಸಲ್ಲಿಸಿದರು.
ಈ ಸಮಾರಂಭದ ವೇದಿಕೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳು ಮರಳಿನ ಮೇಲೆ ಅಶ್ವತ್ಥ ವೃಕ್ಷದ ಅರಳೆ ಎಲೆಗಳಲ್ಲಿ “ ಶ್ರೀ ಮಹರ್ಷಿ ವಾಲ್ಮೀಕಿ ರಾಮಾಯಣ ” ಎಂಬ ನಾಮಫಲಕವನ್ನು ಸಿದ್ಧಗೊಳಿಸಿ ಬಣ್ಣಬಣ್ಣದ ರಂಗೋಲಿ, ವಿವಿಧ ಪುಷ್ಪಗಳಿಂದ ಅಲಂಕಾರಗೊಳಿಸಿದ್ದು ಕಾರ್ಯಕ್ರಮದ ಸೊಬಗನ್ನು ಹೆಚ್ಚಿಸಿತ್ತು. ಪಿ.ಎಸ್ ಸಜ್ಜನ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜಗದೀಶ ಗು.ಭೈರಮಟ್ಟಿ ಉಪನ್ಯಾಸಕರಾದ ಎಸ್.ಎಸ್. ಆದಾಪೂರ, ಡಾ.ಸಂಗಮೇಶ ಬ. ಹಂಚಿನಾಳ, ಡಿ.ವಾಯ್. ಬುಡ್ಡಿಯವರ ಬೋಧಕೇತರ ಸಿಬ್ಬಂದಿ ಶಿವು ಕಟಗಿ ಮುಂತಾದವರು ಭಾಗಿಯಾಗಿದ್ದರು. ಎನ್.ಎಸ್.ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಜಿ.ಎಸ್. ಗೌಡರ ನಿರೂಪಿಸಿ ವಂದಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!