ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಮಾಯಣ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ಹೆಚ್ ಮರಿಯಪ್ಪ

ಬಳ್ಳಾರಿ / ಕಂಪ್ಲಿ : ಮಹರ್ಷಿ ವಾಲ್ಮೀಕಿ ರಾಮಾಯಣ ಮಾನವ ಜನಾಂಗಕ್ಕೆ ಬದುಕುವ ನೈತಿಕತೆಯ ಕೈಗನ್ನಡಿಯಾಗಿದೆ. ಮೇರು ಕೃತಿಯನ್ನು ನೀಡಿದ ವಾಲ್ಮೀಕಿ ಅವರ ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು’ ಎಂದು ಕಂಪ್ಲಿಯ ನಿವೇದಿತಾ ಶಾಲೆಯ ಮುಖ್ಯಗುರು ಹೆಚ್. ಮರಿಯಪ್ಪ ತಿಳಿಸಿದರು.
ಅವರು ಪಟ್ಟಣದ ನಿವೇದಿತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಾನವ ಕುಲಕ್ಕೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಕೃತಿ ಉತ್ತಮ ಕೊಡುಗೆ, ನುಡಿದಂತೆ ನಡೆದುಕೊಳ್ಳುವುದು ವಾಲ್ಮೀಕಿ ರಾಮಾಯಣದಿಂದ ತಿಳಿದು ಬರುತ್ತದೆ.
ಪೋಷಕರು ಮಹಾನ್ ಗ್ರಂಥಗಳನ್ನು ಓದಿ ತಮ್ಮ ಮಕ್ಕಳಿಗೂ ಅದರ ವಿಚಾರಗಳನ್ನು ತಿಳಿಸಬೇಕು. ಮಹಾನ್‌ಪುರುಷರ ಗ್ರಂಥಗಳು ಯುವಜನಾಂಗಕ್ಕೆ ಸ್ಪೂರ್ತಿಯಾಗಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿ ಕೆ. ರಾಮು ಮುಖ್ಯ ಶಿಕ್ಷಕಿ ಎಂ. ಪುಪ್ಪ ಸೇರಿದಂತೆ ಎಲ್ಲಾ ಸಹ ಶಿಕ್ಷಕಿಯರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!