ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಕೀಲ ರಾಕೇಶ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ : ಗೋಪಾಲ ನಾಟೆಕಾರ್

ಕಲಬುರಗಿ/ಸೇಡಂ : ಭಾರತ ಸಂವಿಧಾನದ ಸರ್ವೋಚ್ಚ ನ್ಯಾಯಾಲಯ ಸುಪ್ರೀಂ ಕೋರ್ಟ್ ನ 52ನೇ ಮುಖ್ಯ ನ್ಯಾಯಾಧೀಶರಾದ ಬಿ ಆರ್ ಗವಾಯಿ ಅವರ ಮೇಲೆ ನಡೆದ ಈ ಘಟನೆ ಖಂಡನಿಯವಾದದ್ದು ಎಂದು ಗೋಪಾಲ ಎಲ್ ನಾಟೆಕಾರ್ ಹೇಳಿದ್ದಾರೆ.

ಮತಾಂಧ ಮನಸ್ಥಿತಿಯ ವಕೀಲ ಕಿಶೋರ ರಾಕೇಶ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಅಂಬೇಡ್ಕರ್ ಯುವ ಸೇನೆ ಸೇಡಂ ತಾಲೂಕ ಅಧ್ಯಕ್ಷರು ಹಾಗೂ ವಕೀಲರಾದ ಗೋಪಾಲ ಎಲ್ ನಾಟೆಕಾರ್ ಪತ್ರಿಕಾ ಪ್ರಕಠಣೆಯ ಮೂಲಕ ಆಗ್ರಹಿಸಿದ್ದಾರೆ.

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಯವರು ಧಮ್ಮ ಮಾರ್ಗದಲ್ಲಿ ನಡೆಯುತ್ತಿರುವ ಪ್ರಭಲ ಡಾ. ಅಂಬೇಡ್ಕರ್ ಅನುಯಾಯಿಯಾಗಿದ್ದು ಮುಖ್ಯ ನ್ಯಾಯಮೂರ್ತಿ ಯಾಗಿ ಪ್ರಮಾಣ ವಚನ ಸ್ವೀಕರಿಸಿಸುವ ಸಂದರ್ಭದಲ್ಲಿ ನಾನು ಈ ಮಟ್ಟಕ್ಕೆ ಬೆಳೆಯಲು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನದ ಮೂಲಕ ಪಡೆದ ಶಿಕ್ಷಣ ಕಾರಣ ಎಂದು ಪ್ರಭಲವಾಗಿ ಪ್ರತಿಪಾದಿಸಿದ್ದರು. ಇದನ್ನು ಮನುವಾದಿ ಮನಸ್ಥಿತಿಯ ಜಾತಿವಾದಿಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ.

ಅವರು ಬುಲ್ಡೋಜರ್ ನ್ಯಾಯವನ್ನು ವಿರೋಧಿಸಿ ತೀರ್ಪು ನೀಡಿದರು.
ಅವರು ವಿಷ್ಣು ಮೂರ್ತಿ ಭಗ್ನ ಪ್ರಕರಣದಲ್ಲಿ ನೀವು ಆರ್ಕೆಲಾಜಿಕಲ್ ಸರ್ವೆ ಆಫ್ ಇಂಡಿಯಾಕ್ಕೆ ಅರ್ಜಿ ಸಲ್ಲಿಸಿ ಎಂದು ಸಂವಿಧಾನದ ಪ್ರಕಾರ ತೀರ್ಪು ನೀಡುವ ಮೂಲಕ ನ್ಯಾಯದ ಪರ ನಿಂತಿದ್ದರು.
ಅವರ ತಾಯಿ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದರು.
ಹಾಗಾಗಿ ರಾಕೇಶ್ ಕಿಶೋರ್ ಎಂಬ ಮನುವಾದಿ ಸನಾತನಿಯೊಬ್ಬ ಅವರ ಮೇಲೆ ಶೂ ಎಸೆಯುವ ಪ್ರಯತ್ನ ಮಾಡಿದ್ದಾನೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಭಾರಿಗೆ ಕೇವಲ 6 ತಿಂಗಳ ಕಾಲ ಅಷ್ಟೇ ಸಿ ಜೆ ಐ ಆಗುತ್ತಿರುವುದಕ್ಕೆ ಮನವಾದಿಗಳು ಇಷ್ಟೊಂದು ವಿಷ ಖಾರುತ್ತಿರುವುದು ದುರದೃಷ್ಟಕರ. ಇದು ಸಂಪೂರ್ಣ ದೇಶದ್ರೋಹ ಕೃತ್ಯವಾಗಿದ್ದು, ಅವನಿಗೆ ಕಠಿಣ ಶಿಕ್ಷೆ ಕೊಡುವ ಮೂಲಕ ಜಾತಿವಾದಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಬೇಕು, ಮುಂದೆ ಇಂತಹ ಘಟನೆ ಮರುಕಳಿಸದಂತೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಂಬೇಡ್ಕರ್ ಯುವ ಸೇನೆ ಸೇಡಂ ತಾಲೂಕ ಅಧ್ಯಕ್ಷರು ಹಾಗೂ ವಕೀಲರಾದ ಗೋಪಾಲ ಎಲ್ ನಾಟೆಕಾರ್ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!