ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಕರ್ತರ ಉಚಿತ ಬಸ್ ಪಾಸ್ ಅರ್ಜಿ ಆಹ್ವಾನ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಧ್ಯಮ ಮಾನ್ಯತೆ ಪಡೆದಿರುವ ತಾಲೂಕು ಮಟ್ಟದಲ್ಲಿ ಪತ್ರಕರ್ತರಿಗೆ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲೆಯಾದ್ಯಂತ ಉಚಿತವಾಗಿ ಬಸ್‌ಗಳಲ್ಲಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್‌ಪಾಸ್‌ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪತ್ರಕರ್ತರು ತಾವು ಕಾರ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮೆ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟ್‌ಮೆಂಟ್ ಲಗತ್ತಿಸಿ ʼಸೇವಾಸಿಂಧುʼಪೋರ್ಟಲ್ (https://sevasindhu.karnataka.gov.in) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುವುದು.

ರಾಜ್ಯದ ಎಲ್ಲಾ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ‌ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!