ಹರಪನಹಳ್ಳಿ ತಾಲೂಕಿನ ಎನ್ ಶೀರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾವಳಿಯಲ್ಲಿ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದರು. ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯಶಿಕ್ಷಕ ಮಲ್ಲ ನಾಯಕ್, ಶಿಕ್ಷಕ ವರ್ಗ, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮದ ಯುವಕರು, ಮುಖಂಡರು ಹಾಗೂ ಸಿಬ್ಬಂದಿ ಅಭಿನಂದಿಸಿದರು.
- ಕರುನಾಡ ಕಂದ




















