ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿಜೆಆಯ್ ಬಿ.ಆರ್.ಗವಾಯಿ ಮೇಲೆ ಶೂ ಎಸೆತ : ಆರೋಪಿಗೆ ಕಠಿಣ ಶಿಕ್ಷೆಗೊಳಪಡಿಸಲು ಕುರಕುಂದ ಮಲ್ಲು ಹಲ್ಗಿ ಆಗ್ರಹ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ಕೋರ್ಟ ಹಾಲ್ ನಲ್ಲಿ ವಕೀಲ ರಾಕೇಶ ಕಿಶೋರ್ ಎಂಬ ವ್ಯಕ್ತಿ ತನ್ನ ಶೂ ಬಿಚ್ಚಿ ಮುಖ್ಯ ನ್ಯಾಯಮೂರ್ತಿಗಳಿಗೆ ಎಸೆದ ಘಟನೆಯನ್ನು ಮಾಜಿ ಐಪಿಎಸ್ ಅಧಿಕಾರಿ ಬಿಜೆಪಿ ವಕ್ತಾರ ಭಾಸ್ಕರ್ ರಾವ್ ಅವರು ಶೂ ಎಸೆದ ರಾಕೇಶ್ ಕಿಶೋರ್ ಗೆ ಬೆಂಬಲಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಚೋದನ ಹೇಳಿಕೆ ನೀಡಿದ್ದಾರೆ. ಗವಾಯಿ ಅವರಿಗೆ ಮಾತ್ರ ಅವಮಾನ ಮಾಡಿಲ್ಲ ಇಡೀ ನ್ಯಾಯಾಂಗ ವ್ಯವಸ್ಥೆಗೆ ಹಾಗೂ ವಿಶ್ವ ರತ್ನ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು ಬರೆದ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ ಈ ಸಂಬಂಧ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲರಾದ ರಾಕೇಶ್ ಕಿಶೋರ್ ಹಾಗೂ ಭಾಸ್ಕರ್ ರಾವ್ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಹಾಗೂ ಬಂಧಿಸಿ ಕೂಡಲೇ ಶೂ ಎಸೆದ ರಾಕೇಶ್ ಕಿಶೋರ್ ಅವರನ್ನು ಬಾರ್ ಕೌನ್ಸಿಲ್ ನಿಂದ ಶಾಶ್ವತ ಅಮಾನತ್ತು ಮಾಡಬೇಕೆಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂ. ಆರ್. ಎಚ್. ಎಸ್) ಸಮಿತಿಯಿಂದ ಮಾನ್ಯ ಗೌರವನ್ವಿತ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ವಡಗೇರ
ತಹಶೀಲ್ದಾರ್ ಅವರ ಮುಖಾಂತರ ಸಲ್ಲಿಸಲಾಯಿ. ನಂತರ ಮಾತನಾಡಿದ ಯಾದಗಿರಿ ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂ. ಆರ್. ಎಚ್, ಎಸ್ ) ಕಾರ್ಯದರ್ಶಿ ಮಲ್ಲು ಹಲಗಿ ಅವರು ದಲಿತರು ಉನ್ನತ ಹುದ್ದೆಯಲ್ಲಿ ಇದ್ದರೆ ಜಾತಿ ವಿರೋಧಿಗಳಿಗೆ ಸಹಿಸಲಾಗುತ್ತಿಲ್ಲ ಇನ್ನು ಕೆಲವರು ಪ್ರಚೋದನ ಹೇಳಿಕೆ ನೀಡುತ್ತಲೇ ಇದ್ದಾರೆ ಮತ್ತು ದಲಿತರ ಮೇಲೆ ನಿರಂತರ ದೌರ್ಜನ್ಯ ದಬ್ಬಾಳಕ್ಕೆ ಪ್ರಕರಣಗಳು ನಡೆಯುತ್ತಿದ್ದು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ ಇನ್ನು ಮುಂದೆ ಇಂಥ ಘಟನೆಗಳು ಮರುಕಳಿಸಿದಂತೆ ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಡಗೇರಾ ತಾಲೂಕು ಯುವ ಘಟಕ ಅಧ್ಯಕ್ಷ ಹಣಮಂತ ಒಡ್ಕರ್, ಪ್ರಧಾನ ಕಾರ್ಯದರ್ಶಿ ಶಿವಶರಣಪ್ಪ ಗೋನಾಲ, ಸಿದ್ದಪ್ಪ ಬೀರನಕಲ್, ಮಹೇಶ್ ಹುಲಿ, ಹುಲಗಪ್ಪ ಹಿರಿಮೆಟಿ ಹಾಗೂ ಇತರರು ಹಾಜರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!