ಬಳ್ಳಾರಿ / ಕಂಪ್ಲಿ : ತಾಲೂಕಿನ ಸಣಾಪುರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರದಲ್ಲಿ ಮಹಿಳೆಯರಿಗೆ ಸರ್ಕಾರಿ ಸೌಲಭ್ಯಗಳು ಕುರಿತು ಜಾಗೃತಿ ಕಾರ್ಯಕ್ರಮ ಜರುಗಿತು.
ಈ ವೇಳೆ ಸಮನ್ವಯ ಅಧಿಕಾರಿ ಜಿ. ರೇಖಾ ಮಾತನಾಡಿ ಪ್ರತಿಯೊಬ್ಬ ಮಹಿಳೆಯರು ಜ್ಞಾನವಿಕಾಸದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರತಿಯೊಂದು ವಿಚಾರಗಳನ್ನು ಅರಿತು ಸುಂದರ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.
ನಂತರ ಸಂಪನ್ಮೂಲ ವ್ಯಕ್ತಿ ಶಿಕ್ಷಕ ಬಡಿಗೇರ್ ಜಿಲಾನಸಾಬ್ ಮಾತನಾಡಿ ಸುಕನ್ಯಾ ಸಮೃದ್ಧಿ, ಗೃಹಲಕ್ಷ್ಮಿ, ಸ್ವ – ನಿಧಿ ಯೋಜನೆ, ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳು, ಕೌಶಲ್ಯ ತರಬೇತಿ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಇತರ ಹಲವು ಯೋಜನೆಗಳೂ ಇವೆ.
ಆರ್ಥಿಕ ಸಬಲೀಕರಣ ಮತ್ತು ಉದ್ಯಮಶೀಲತೆ ಸೇರಿದಂತೆ ಹಲವಾರು ಯೋಜನೆಗಳು ಬಗ್ಗೆ ಮಹಿಳೆಯರು ತಿಳಿದುಕೊಂಡು ಬರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಪ್ರಗತಿಯನ್ನು ಹೊಂದಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿ ಸೇರಿದಂತೆ ಸಂಘದ ಸದಸ್ಯರು ಇದ್ದರು.
ವರದಿ : ಕರುನಾಡ ಕಂದ ಪತ್ರಿಕೆ



















