ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಿ.ಎಸ್.ಸಜ್ಜನ ಕಾಲೇಜು ವಿದ್ಯಾರ್ಥಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆ

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೇವೂರ ಆದರ್ಶ ವಿದ್ಯಾವರ್ಧಕ ಸಂಘದ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿರುವ ಕು. ಸಂಗಮೇಶ ಕರಿಯಪ್ಪ ಹಾಲವರ ಮಲ್ಲಕಂಬ ಕ್ರೀಡೆಯಲ್ಲಿ ಬಾಗಲಕೋಟೆ ವಿಶ್ವವಿದ್ಯಾಲಯ ಜಮಖಂಡಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾನೆ. ಬಾಗಲಕೋಟೆಯ ಬಸವೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜರುಗಿದ ಮಲ್ಲಕಂಬ ಸ್ಪರ್ಧೆಯಲ್ಲಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾದ ಒಟ್ಟು ಆರು ವಿದ್ಯಾರ್ಥಿಗಳ ಪೈಕಿ ಪಿ.ಎಸ್.ಸಜ್ಜನ ಕಾಲೇಜಿನ ಸಂಗಮೇಶ.ಕ ಹಾಲವರ ಒಬ್ಬರಾಗಿದ್ದು ಅ.೨೪ ರಿಂದ ೨೭ರವರೆಗೆ ಚೆನ್ನೈನ ವಿನಾಯಕ ಮಿಸ್ಸೆನ್ಸ್ ರೀಸರ್ಚ ಫೌಂಡೇಶನ್ ಯುನಿವರ್ಸಿಟಿಯಲ್ಲಿ ನಡೆಯವ ಅಖಿಲ ಭಾರತ ಅಂತರ ವಿವಿ ಸ್ಪರ್ಧೆಯಲ್ಲಿ ಬಾಗಲಕೋಟೆ ವಿಶ್ವವಿದ್ಯಾಲಯ ಪ್ರತಿನಿಧಿಸಲಿದ್ದಾರೆ.
ವಿದ್ಯಾರ್ಥಿಗೆ ಸಂಘದ ಚೇರ‍್ಮನ್ನರಾದ ಶ್ರೀ ಜಿ.ಜಿ. ಮಾಗನೂರ ವಕೀಲರು, ಸರ್ವಸದಸ್ಯರು ಪ್ರಾಚಾರ್ಯರಾದ ಡಾ. ಜಗದೀಶ ಗು. ಭೈರಮಟ್ಟಿ ಕ್ರೀಡಾವಿಭಾಗದ ಮುಖ್ಯಸ್ಥರಾದ ಶ್ರೀ ಜಿ.ಎಸ್ ಗೌಡರ ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!