ಕಲಬುರಗಿ/ ಯಡ್ರಾಮಿ : ತಾಲೂಕ ಘೋಷಣೆಯಾಗಿ ಹಲವಾರು ವರ್ಷಗಳು ಕಳೆದರೂ ಸಹ ಯಾವುದೇ ರೀತಿಯಿಂದ ಯಡ್ರಾಮಿ ತಾಲೂಕು ಅಭಿವೃದ್ಧಿ ಆಗದಿರುವುದು ದುರ್ದೈವದ ಸಂಗತಿಯಾಗಿದೆ. ತಾಲೂಕ ಘೋಷಣೆಯಾಗಿ ಹಲವಾರು ವರ್ಷಗಳಾದರೂ ತಾಲೂಕಿನಲ್ಲಿ ಯಾವುದೇ ರೀತಿಯ ಯಾವುದೇ ಅಭಿವೃದ್ಧಿಯ ಕಾಮಗಾರಿಗಳು ನಡೆದಿರುವುದಿಲ್ಲ. ಈ ಕೂಡಲೇ ತಾಲೂಕಿನ ಶಾಸಕರಾದ ಡಾ. ಅಜಯ್ ಸಿಂಗ್ ರವರು ಮುಖ್ಯಮಂತ್ರಿಗಳಿಗೆ ಯಡ್ರಾಮಿ ತಾಲೂಕಿನಲ್ಲಿ ಕೈಗಾರೀಕರಣಕ್ಕೆ ಒತ್ತು ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಯಡ್ರಾಮಿ ತಾಲೂಕ ನಮ್ಮ ಕರ್ನಾಟಕ ಸೇನೆಯ ತಾಲೂಕ ಅಧ್ಯಕ್ಷರಾದ ಮಹೇಶ್ ಪಾಟೀಲ್ ಕಡಕೋಳ ಅವರು ಈ ಸಂದರ್ಭದಲ್ಲಿ ಶಾಸಕರಿಗೆ ಒತ್ತಾಯಿಸಿದ್ದಾರೆ.
ಅದೇ ರೀತಿಯಾಗಿ ಅತಿವೃಷ್ಟಿಯಿಂದ ಅಥವಾ ಅನಾವೃಷ್ಟಿಯಿಂದ ರೈತರ ಬೆಳೆಗಳು ಸಂಪೂರ್ಣ ಮಳೆಯ ಹೊಡೆತದಿಂದ ತತ್ತರಿಸಿ ಹೋಗಿದ್ದಾರೆ ರೈತರಿಗೆ ಆದ ನಷ್ಟವನ್ನು ಸರ್ಕಾರವೇ ತುಂಬಿಕೊಡಬೇಕು ಅದೇ ರೀತಿಯಾಗಿ ಅತಿ ಶೀಘ್ರದಲ್ಲಿ ಎಲ್ಲಾ ರೈತರ ಖಾತೆಗಳಿಗೆ ಬೆಳೆ ಪರಿಹಾರ ಧನವನ್ನು ಅತಿ ಶೀಘ್ರದಲ್ಲಿ ಬಿಡುಗಡೆಗೊಳಿಸಬೇಕು, ಸರಕಾರ ಘೋಷಣೆ ಮಾಡಿದರೆ ಸಾಲದು. ಆದಷ್ಟು ಶೀಘ್ರದಲ್ಲಿ ಅನುದಾನ ಬಿಡುಗಡೆಗೊಳಿಸಬೇಕು ಆದಷ್ಟು ಶೀಘ್ರದಲ್ಲಿ ರೈತರ ಖಾತೆಗಳಿಗೆ ಹಣ ಜಮೆ ಮಾಡಬೇಕು ಎಂದು ಈ ಸಂದರ್ಭದಲ್ಲಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
- ಕರುನಾಡ ಕಂದ



















