ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಚಿವ ಪ್ರಿಯಾಂಕ ಖರ್ಗೆಯ ರಾಜೀನಾಮೆಗೆ ಒತ್ತಾಯ

ಸಂಘದ ಚಟುವಟಿಕೆಯನ್ನು ನಿಯಂತ್ರಿಸಲು ಯಾರಿಂದಲೂ ಸಾಧ್ಯವಿಲ್ಲ : ಶಿವಸೇನಾ ಅಧ್ಯಕ್ಷ ಮಲಕಣ್ಣ ಹಿರೆ ಪೂಜಾರಿ ಖಂಡನೆ

ಕಲಬುರಗಿ/ಜೇವರ್ಗಿ : ಸಚಿವ ಪ್ರಿಯಾಂಕ ಖರ್ಗೆಯವರು ರಾಷ್ಟ್ರೀಯ ಸ್ವಯಂ ಸೇವಾ ಸಂಘ (RSS) ಚಟುವಟಿಕೆಗಳಿಗೆ ಅಂಕುಶ ಹಾಕುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದು ದುರಾದೃಷ್ಟಕರ ಬೆಳವಣಿಗೆಯಾಗಿದೆ ಎಂದು ಜೇವರ್ಗಿ ಶಿವಸೇನಾ ಅಧ್ಯಕ್ಷರಾದ ಮಲ್ಕಣ್ಣ ಹಿರೇ ಪೂಜಾರಿ ಚೆನ್ನೂರ ಅವರು ಪ್ರಿಯಾಂಕ ಖರ್ಗೆ ಅವರ ನಡೆಯನ್ನು ಖಂಡಿಸಿದ್ದಾರೆ. ಭಾರತ ದೇಶಕ್ಕೆ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕೊಡುಗೆ ಅಪಾರವಾಗಿದೆ ಅದೇ ರೀತಿಯಾಗಿ 2002 ರಲ್ಲಿಯೇ ಗೃಹ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಸ್ವತಃ ಆರ್ ಎಸ್ ಎಸ್ ಶಿಬಿರಕ್ಕೆ ಭೇಟಿ ನೀಡಿ ರಾಷ್ಟ್ರೀಯ ಸೇವಾ ಸಂಘಟನೆಯ ಕಾರ್ಯಕ್ರಮದ ವೈಖರಿಯ ಕುರಿತು ಶ್ಲಾಘನೆಯನ್ನು ವ್ಯಕ್ತಪಡಿಸಿದರು ಆದರೆ ಅವರ ಮಗನಾದ ಪ್ರಿಯಾಂಕ ಖರ್ಗೆ ಅವರು ಆರ್ ಎಸ್ ಎಸ್ ಸಂಘಟನೆಯನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ. ಈ ಕೂಡಲೆ ಸಚಿವರಾದ ಪ್ರಿಯಾಂಕ ಖರ್ಗೆ ಅವರು ನಾಡಿನ ಜನತೆಗೆ ಕ್ಷಮೆ ಕೇಳಬೇಕು ಅದೇ ರೀತಿಯಾಗಿ ಸಚಿವರಾಗಿ ಸಂವಿಧಾನ ಬದ್ಧ ಹುದ್ದೆಗೆ ತಕ್ಕಂತೆ ನಡೆದುಕೊಳ್ಳಬೇಕು ಈ ರೀತಿಯ ನಡೆ ಸಚಿವರಿಗೆ ಶೋಭೆ ತರುವಂತದ್ದಲ್ಲ ಸಮಾಜದಲ್ಲಿ ಈ ರೀತಿಯ ಹೇಳಿಕೆ ಅಶಾಂತಿಗೆ ಕಾರಣವಾಗುತ್ತದೆ ಆದ್ದರಿಂದ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆದುಕೊಂಡು ಕ್ಷಮೆ ಯಾಚಿಸಬೇಕೆಂದು ಜೇವರ್ಗಿ ಶಿವಸೇನಾ ಅಧ್ಯಕ್ಷರಾದ ಮಲಕಣ್ಣ ಹಿರೇ ಪೂಜಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಒಂದು ವೇಳೆ ಸಚಿವರು ಈ ಹೇಳಿಕೆ ಕುರಿತು ನಿರ್ಲಕ್ಷ್ಯ ವಹಿಸಿದರೆ ಜೇವರ್ಗಿ ಬಂದ್ ಗೆ ಕರೆಕೊಟ್ಟು ಉಗ್ರ ಹೋರಾಟವನ್ನು ಸಚಿವರಾದ ಪ್ರಿಯಾಂಕ ಖರ್ಗೆ ಅವರ ವಿರುದ್ಧ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!