ಚಾಮರಾಜನಗರ/ ಹನೂರು: ತಾಲೂಕಿನ ಕೌದಳ್ಳಿ ಗ್ರಾಮದ ಅಲ್ಪಸಂಖ್ಯಾತರ ಬೀದಿಯಲ್ಲಿ 2024/25 ಸಾಲಿನ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು 20 ಲಕ್ಷದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ನಂತರ ಮಾತನಾಡಿ ಈ ಕಾಮಗಾರಿಯನ್ನು ನಿರ್ವಹಿಸುವವರು ಯಾವುದೇ ಲೋಪದೋಷ ವಾಗದಂತೆ ಗುಣಮಟ್ಟವನ್ನು ಕಾಯ್ದುಕೊಂಡು ಅಚ್ಚುಕಟ್ಟಾಗಿ ನಿರ್ಮಿಸುವಂತೆ ಸೂಚನೆ ನೀಡಿದರು.
ಅಲ್ಲದೆ ಕೌದಳ್ಳಿಯ ವಿವಿಧ ಭಾಗದಲ್ಲಿ ಚರಂಡಿಗಳ ಹೂಳು ತೆಗೆಸಿ ಸ್ವಚ್ಛತೆಯನ್ನು ಕಾಪಾಡುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆಯನ್ನು ನೀಡಿದರು.
ಇದೇ ಸಂರ್ಭದಲ್ಲಿ ಬಾಬು, ಅಸ್ಲಮ್, ಸಮಿ, ಮುದಸಿರ್, ನೂರ್, ಅಜಗರ್, ಜೇಸಿಮ್ ಪಾಷ, ಮಂಜೇಶ್ ಗೌಡ, ಚಿನ್ನವೆಂಕಟ್, ವಿಜಯ್ ಕುಮಾರ್, ನಾಗರಾಜು, ಮಧು ಹಾಗೂ ಇನ್ನಿತರರು ಇದ್ದರು.
ವರದಿ ಉಸ್ಮಾನ್ ಖಾನ್



















