ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

2 ಕೋಟಿ ವೆಚ್ಚದ ಚೆಕ್ ಡ್ಯಾಮ್ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್

ಚಾಮರಾಜನಗರ/ಹನೂರು :
ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಲೂರು ಬೃಹನ್ ಮಠದ ಬಳಿ 2ಕೋಟಿ ವೆಚ್ಚದ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಚೆಕ್ ಡ್ಯಾಮ್ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಯನ್ನು ನೆರವೇರಿಸಿದ ಶಾಸಕರು ನಂತರ ಮಾತನಾಡಿ ಗುಣಮಟ್ಟ ಕಾಮಗಾರಿಯನ್ನು ಕೈಗೊಳ್ಳುವಂತೆ ಗುತ್ತಿಗೆ ದಾರರಿಗೆ ಸೂಚಿಸಿದರು.

ಇದಲ್ಲದೆ ಸಾಲೂರು ಮಠದ ಸುತ್ತ ನಿರ್ಮಿಸುವ ತಡೆಗೋಡೆಯನ್ನು ಅಚ್ಚುಕಟ್ಟಾಗಿ ನಿರ್ಮಿಸಿ ಭಕ್ತದಿಗಳಿಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು. ಅಲ್ಲದೆ ಈ ಪುಣ್ಯ ಸ್ಥಳದಲ್ಲಿ ಯಾವುದೇ ರೀತಿಯಾದ ಲಾಭವನ್ನು ಕಾಣದೆ ಗುಣಮಟ್ಟದ ವಸ್ತುಗಳನ್ನು ಬಳಸಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಬಾರುವಂತಹ ಭಕ್ತರು ಆರೈಸುವುದೇ ನಿಮ್ಮ ಬಾಳಲ್ಲಿ ನೆಮ್ಮದಿಯನ್ನು ತರುತ್ತದೆ. ಮುಂದಿನ ದಿನಗಳಲ್ಲಿ ಸಾಲೂರು ಮಠವು ಅತೀ ಹೆಚ್ಚು ಭಕ್ತರನ್ನು ಸೆಳೆಯುವಂತಾಗಿ ಭಕ್ತರು ನೆಮ್ಮದಿಯಿಂದ ವಾಸ್ತವ್ಯವನ್ನು ಊಡಿ ತಮ್ಮ ಕಷ್ಟಗಳನ್ನು ಪರಿಹರಿಸಿಕೊಳ್ಳುವಂತವರಾಗಲಿ ಎಂದು ಈ ಸಮಯದಲ್ಲಿ ತಿಳಿಸಿದರು.

ಈ ಸಂರ್ಭದಲ್ಲಿ ಶಾಂತಮಲ್ಲಿಕಾರ್ಜುನ ಸ್ವಾಮಿಗಳು, ಪ್ರಾಧಿಕಾರದ ಕಾರ್ಯದರ್ಶಿ ಎ ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಸಣ್ಣ ನೀರಾವರಿ ಇಲಾಖೆಯ ಎಇಇ ಅಭಿಲಾಷ್, ಎ.ಇ ಪ್ರತಾಪ್ ಹಾಗೂ ಮುಖಂಡರುಗಳಾದ ಮಂಜೇಶ್ ಗೌಡ, ಚಿನ್ನವೆಂಕಟ್, ಡಿ ಕೆ ರಾಜು, ಸುರೇಶ್, ನವೀನ್, ಹಾಗೂ ಇತರರು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!