ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ : ಜೂಗಲ್ ಮಂಜುನಾಯಕ

ಬಳ್ಳಾರಿ / ಕಂಪ್ಲಿ :
ಪಟ್ಟಣವೂ ಸೇರಿದಂತೆ ತಾಲ್ಲೂಕಿನಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು ತಹಶೀಲ್ದಾರ್ ಜೂಗಲ್ ಮಂಜುನಾಯಕ ತಿಳಿಸಿದರು.
ಅವರು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನ.1ರಂದು ಆಯಾ ಸರ್ಕಾರಿ ಕಚೇರಿಗಳನ್ನು ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆಯುವ ಧ್ವಜಾರೋಹಣದಲ್ಲಿ ಭಾಗವಹಿಸಬೇಕು. ತಹಶೀಲ್ದಾರ್ ಕಚೇರಿಯಲ್ಲಿ ನಡೆಯುವ ಸಮಾರಂಭದಲ್ಲಿ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು. ನಂತರ ಪಟ್ಟಣದ ಐತಿಹಾಸಿಕ ಸೋಮಪ್ಪನ ದೇವಸ್ಥಾನದ ಆವರಣದಿಂದ ಅಲಂಕೃತ ವಾಹನದಲ್ಲಿ ಕನ್ನಡದ ರಾಜರಾಜೇಶ್ವರಿ ಭುವನೇಶ್ವರಿ ಭಾವಚಿತ್ರವನ್ನಿಟ್ಟು, ವಿವಿಧ ಸ್ತಭ್ದ ಚಿತ್ರಗಳೊಂದಿಗೆ, ವಿವಿಧ ಜಾನಪದ ಕಲಾ ತಂಡಗಳೊಂದಿಗೆ ,ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದೊಂದಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅನೇಕ ಗಣ್ಯರು ಮಾತನಾಡಿ, ಪಟ್ಟಣದಲ್ಲಿ ವಾಣಿಜ್ಯ ಮಳಿಗೆಗಳಲ್ಲಿ ನಾಮಫಲಕಗಳನ್ನು ಶೇ.60%ರಷ್ಟು ಕನ್ನಡದಲ್ಲಿರಬೇಕೆನ್ನುವ ನಿಯಮವನ್ನು ಬಹುತೇಕ ಅಂಗಡಿಗಳಲ್ಲಿ ಪಾಲಿಸುತ್ತಿಲ್ಲ, ಅಂಗಡಿಗಳಲ್ಲಿ ರಸೀದಿಗಳನ್ನು ಕನ್ನಡದಲ್ಲಿ ಹಾಕಿಸುತ್ತಿಲ್ಲ. ಮುದ್ರಣ ಹಾಗೂ ಪ್ಲೆಕ್ಸ್ ಕೇಂದ್ರಗಳಿಗೆ ಕನ್ನಡವನ್ನು ಕಡ್ಡಾಯವಾಗಿ ಹಾಕುವಂತೆ ಸೂಚನೆ ನೀಡಬೇಕು. ಪುರಸಭೆಯವರು ವಾಣಿಜ್ಯ ಮಳಿಗೆಗಳ ಪರವಾನಿಗೆ ನೀಡುವಾಗ ಈ ಬಗ್ಗೆ ಗಮನ ಹರಿಸಬೇಕು. ಹಾಗೂ ರಾಜ್ಯೋತ್ಸವ ಆಚರಣೆಗೆ ಹಾಜರಾಗದ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ತಹಶೀಲ್ದಾರ್ ಜೂಗಲ್ ಮಂಜುನಾಯಕ ಅವರು, ಮುಂದಿನ ದಿನಗಳಲ್ಲಿ ಕನ್ನಡ ಪರ ಸಂಘಟನೆಗಳು ಸೂಚಿಸಿರುವ ಮನವಿಗಳ ಬಗ್ಗೆ ಸೂಕ್ತ ಕ್ರಮಗಳನ್ನು ಕೃಗೊಳ್ಳುವುದಾಗಿ ಭರವಸೆಯನ್ನು ನೀಡಿದರು. ಅದ್ದೂರಿ ರಾಜ್ಯೋತ್ಸವದ ನಿಮಿತ್ತ ಸರ್ಕಾರಿ ಕಚೇರಿಗಳನ್ನು, ಪ್ರಮುಖ ವೃತ್ತಗಳನ್ನು ವಿದ್ಯುತ್ ದೀಪಗಳಿಂದ, ತಳಿರು, ತೋರಣಗಳಿಂದ ಶೃಂಗರಿಸಬೇಕು ಎಂದು ಸೂಚಿಸಿದರಲ್ಲದೆ, ಇಂದಿನ ಪೂರ್ವಭಾವಿ ಸಭೆಗೆ ಹಾಜರಾಗದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಕಂಪ್ಲಿ ತಾಲ್ಲೂಕು ಪಂಚಾಯತಿ ಇಒ ಆರ್.ಕೆ.ಶ್ರೀ ಕುಮಾರ್, ಶಿರಸ್ತೇದಾರ ಎಸ್.ಕೆ.ರಮೇಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ಬಸವರಾಜ, ಇಸಿಒ ರೇವಣ್ಣ, ವಿದ್ಯಾರ್ಥಿ ನಿಲಯದ ವಿರೂಪಾಕ್ಷಪ್ಪ, ಕೃಷಿ ಅಧಿಕಾರಿ ಸೋಮೇಶಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಕನ್ನಡ ಪರ ಸಂಘಟನೆಗಳ ಮುಖಂಡರು, ಪಟ್ಟಣದ ಹಿರಿಯರಾದ ಕೆ.ಎಂ.ಹೇಮಯ್ಯಸ್ವಾಮಿ, ಅರವಿ ಬಸವನಗೌಡ, ಬಿ.ಅಂಬಣ್ಣ, ಕರೇಕಲ್ ಮನೋಹರ್, ಜಿ.ಪ್ರಕಾಶ, ಬಿ.ವಿರೂಪಾಕ್ಷಿ ಯಾದವ್, ಟಿ.ಎಚ್.ಎಂ.ರಾಜಕುಮಾರ್, ಹಾದಿಮನಿ ಕಾಳಿಂಗ ವರ್ದನ್, ಬಿ.ಮಂಜುಳಾ ಸೇರಿಂತೆ ಇತರರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!