ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಕುಷ್ಟರೋಗ ಪತ್ತೆ ಹಚ್ಚುವ ಅಭಿಯಾನದ ಕರಪತ್ರಗಳ ಅನಾವರಣ

ಬಳ್ಳಾರಿ/ ಕಂಪ್ಲಿ :
ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ಸಮುದಾಯ ಆರೋಗ್ಯ ಕೇಂದ್ರ ಕಂಪ್ಲಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕುಷ್ಟರೋಗ ಪತ್ತೆ ಹಚ್ಚುವ ಅಭಿಯಾನ ಕಾರ್ಯಕ್ರಮದ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯು ತಹಶೀಲ್ದಾರ್ ಜೂಗಲ್ ಮಂಜುನಾಯಕ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ ಜೂಗಲ್ ಮಂಜುನಾಯಕ ಆವರು ಕುಷ್ಟರೋಗವು ಮೈಕೋಬ್ಯಾಕ್ಟೀರಿಯಂ ಲೆಪ್ರಾಬ್ಯಾಸಿಲೆ ಎಂಬ ರೋಗಾಣುವಿನಿಂದ ಬರುವ ಖಾಯಿಲೆಯಾಗಿದೆ. ಈ ರೋಗದಲ್ಲಿ ಸಾಂಸಾರ್ಗಿಕ ಹಾಗೂ ಅಸಾಂಸಾರ್ಗಿಕ ಎನ್ನುವ ಎರಡು ವಿಧಗಳಿವೆ. ಒಟ್ಟು ರೋಗಿಗಳಲ್ಲಿ ಶೇ.3%ರಷ್ಟಿರುವ ಸಾಂಸರ್ಗಿಕ ರೋಗಿಗಳಿಂದ ಈ ರೋಗ ಬಹಳ ನಿಧಾನವಾಗಿ ಹರಡುತ್ತದೆ. ಈ ರೋಗವು ವಂಶಪಾರಪರ್ಯವಲ್ಲ ಹಾಗೂ ಪಾಪ ಶಾಪಗಳಿಂದ ಬರುವುದಿಲ್ಲ. ಈ ರೋಗದ ಲಕ್ಷಣಗಳು ಕಂಡ ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕೆಂದರು.
ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ. ಬಸವರಾಜ ಮಾತನಾಡಿ, ಕುಷ್ಟರೋಗ ಲಕ್ಷಣಗಳ ಬಗ್ಗೆ ವಿವರಿಸಿ ತಿಳಿ ಬಿಳಿ ತಾಮ್ರವರ್ಣದ ಮಚ್ಚೆಗಳು, ಚರ್ಮದ ಬಣ್ಣದಲ್ಲಿ ಯಾವುದೇ ಬದಲಾವಣೆ, ಮಚ್ಚೆಗಳ ಮೇಲೆ ದಪ್ಪನಾದ ಚರ್ಮ ಇರುವುದು, ಹೊಳೆಯುವ ಅಥವಾ ಎಣ್ಣೆಯುಕ್ತ ಮುಖದ ಚರ್ಮವಾಗಿರುವುದು, ಕಣ್ಣುಗಳ ರಪ್ಪೆ ಮುಚ್ಚಲು ಅಸಮರ್ಥತೆಯಾಗುವುದು ಸೇರಿದಂತೆ ವಿವಿಧ ಲಕ್ಷಣಗಳು ಕಂಡು ಬಂದರೆ ಇವುಗಳನ್ನು ಗುಪ್ತವಾಗಿಡದೇ ವೈದ್ಯರಿಗೆ ತೋರಿಸುವುದು, ರೋಗದ ಪ್ರಾರಂಭಿಕ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರಲ್ಲದೆ, ಈ ರೋಗಕ್ಕೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಔಷಧಿ ದೊರೆಯುತ್ತದೆ.ಚಿಕಿತ್ಸೆಯು ಸರಳ ಅವಧಿ ಕೇವಲ 6 ಅಥವಾ 12 ತಿಂಗಳು ಮಾತ್ರ ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು ಎಂದು ವಿವರಿಸಿದರು.
ನಂತರ ಕುಷ್ಟರೋಗ ಪತ್ತೆ ಹಚ್ಚುವ ಹಾಗೂ ಕುಷ್ಟರೋಗ ನಿರ್ಮೂಲನ ಅಭಿಯಾನ ಕಾರ್ಯಕ್ರಮದ ಕರಪತ್ರಗಳನ್ನು ತಹಶೀಲ್ದಾರ್ ಜೂಗಲ್ ಮಂಜುನಾಯಕ ಮತ್ತು ಅಧಿಕಾರಿಗಳು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ತಾ.ಪಂ.ಇಒ ಆರ್.ಕೆ.ಶ್ರೀಕುಮಾರ್, ಪುರಸಭೆ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಬಳ್ಳಾರಿ ಡಿ.ಎಲ್.ಒ.ಕಚೇರಿಯ ಪ್ರಹ್ಲಾದ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!