ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶೇ.60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸದಿರುವ ಅಂಗಡಿ ಮಾಲೀಕರುಗಳ ಮೇಲೆ ಕೇಸು ದಾಖಲಿಸಿ ದಂಡ ವಿಧಿಸಬೇಕು :ವಿನಾಯಕ ಆಚಾರಿ

ಉತ್ತರ ಕನ್ನಡ :ಸರ್ಕಾರದ ಆದೇಶವಿದ್ದರೂ ಕನ್ನಡ ನಾಮಫಲಕಗಳನ್ನು ಅಳವಡಿಸದಿರುವ ಅಂಗಡಿ ಮುಂಗಟ್ಟುಗಳ ಪರವಾನಗಿಯನ್ನು ರದ್ದುಪಡಿಸುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ರವರಿಗೆ ಕರುನಾಡ ವಿಜಯಸೇನೆಯ ಜಿಲ್ಲಾಧ್ಯಕ್ಷರಾದ ವಿನಾಯಕ ಆಚಾರಿ ರವರು ಸಂಬಂಧಪಟ್ಟ ಇಲಾಖೆಗೆ ಆದೇಶ ಹೊರಡಿಸಬೇಕೆಂದು ಮನವಿ ಮಾಡಿದ್ದಾರೆ.

ನಗರಸಭೆ, ಪುರಸಭೆ ಪಟ್ಟಣ ಪಂಚಾಯತ್ ಹಾಗೂ ಇನ್ನಿತರೆ ಇಲಾಖೆಗಳಿಂದ ಪರವಾನಗಿ ಪಡೆದು ವ್ಯಾಪಾರ ವಹಿವಾಟು ನಡೆಸುತ್ತಿರುವವರು ಶೇ.60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಬೇಕೆಂಬ ನಿಯಮವಿದ್ದರೂ ಪಾಲನೆ ಮಾಡುತ್ತಿಲ್ಲ. ಖಾಸಗಿ ಆಸ್ಪತ್ರೆ, ಶಾಲಾ-ಕಾಲೇಜು, ಸಂಘ ಸಂಸ್ಥೆಗಳು, ಎಂಟರ್ ಪ್ರೈಸಸ್ ಕಚೇರಿಗಳು ಕನ್ನಡ ನಾಮಫಲಕಗಳನ್ನು ಹಾಕಬೇಕೆಂದು ಹಲವಾರು ಬಾರಿ ಮನವಿ ಮಾಡಿದ್ದೇವೆ. ಸಂಬಂಧಪಟ್ಟ ಇಲಾಖೆಯವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೆ ಎಚ್ಚೆತ್ತುಕೊಂಡು ಕನ್ನಡ ನಾಮಫಲಕಗಳ ಅಳವಡಿಕೆಗೆ ಸೂಚಿಸಬೇಕು. ಇಲ್ಲವಾದಲ್ಲಿ ನವಂಬರ್ 1 ರಂದು ಕನ್ನಡ ರಾಜ್ಯೋತ್ಸವದಂದು ವಿನೂತನವಾಗಿ ಪ್ರತಿಭಟಿಸಲಾಗುವುದೆಂದು ಕರುನಾಡ ವಿಜಯಸೇನೆ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ವಿನಾಯಕ ಆಚಾರಿ ಎಚ್ಚರಿಸಿದ್ದಾರೆ .

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!