ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹುಲಿ ದಾಳಿಗೆ ಒಳಗಾದ ರೈತನಿಗೆ 50 ಲಕ್ಷ ಪರಿಹಾರಕ್ಕೆ ತೇಜಸ್ವಿ ಆಗ್ರಹ

ಮೈಸೂರು: ಸರಗೂರಿನ ಬಡಗಲಪುರದಲ್ಲಿ ಹುಲಿ ಸೆರೆ ಕಾರ್ಯಾಚರಣೆ ವೇಳೆ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ರೈತ ವ್ಯಗ್ರನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ 50 ಲಕ್ಷ ಪರಿಹಾರ ನೀಡುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.

ಮಹದೇವ್‌ ಎಂಬ ರೈತನ ಮೇಲೆ ಹುಲಿ ಭಿಕಾರವಾಗಿ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿರುವ ರೈತ ಮಹಾದೇವ್ ಅವರಿಗೆ ಕೂಡಲೇ ಸರ್ಕಾರ 50 ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಮುಖ, ಕೈ, ಕಾಲುಗಳಿಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕುಸಿದು ಬಿದ್ದಿರುವ ವಿಡಿಯೋ ತುಣುಕುಗಳನ್ನು ನೋಡಿ ಆಘಾತ ತಂದಿದೆ ಎಂದು ತಿಳಿಸಿದ್ದಾರೆ.

ಕೂಂಬಿಂಗ್ ನಡೆಯುತ್ತಿದೆ ಎಂದು ಅರಣ್ಯ ಇಲಾಖೆಯ‌ ಅಧಿಕಾರಿಗಳು ಸ್ಥಳೀಯರಿಗೆ ಮಾಹಿತಿ ನೀಡಿ ಎಚ್ಚರಿಸ ಬೇಕಿತ್ತು. ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೆ ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ. ಒಂದು ವೇಳೆ ಕೂಂಬಿಂಗ್ ಮಾಹಿತಿ ನೀಡಿಲ್ಲ ಎಂದರೆ ಸಂಬಂಧಿಸಿದ ಅರಣ್ಯ ಇಲಾಖೆಯ‌ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ತೇಜಸ್ವಿ ಕಿಡಿಕಾರಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!