ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೃಷಿ ಕಾರ್ಯಾನುಭವ ಶಿಬಿರ ಸಮಾರೋಪ ಸಮಾರಂಭ

ವಿಜಯಪುರ : ಕೃಷಿ ಮಹಾವಿದ್ಯಾಲಯ ವಿಜಯಪುರದ ಅಂತಿಮ ವರ್ಷದ ವಿದ್ಯಾರ್ಥಿಗಳು ದಿನಾಂಕ 21/7/2025 ರಿಂದ ತಮ್ಮ ಕೃಷಿ ಕಾರ್ಯಾನುಭವ ಶಿಬಿರ-2025ರ ನಿಮಿತ್ತವಾಗಿ ವಿಜಯಪುರ ಜಿಲ್ಲೆಯ ತಿಡಗುಂದಿ ಗ್ರಾಮದಲ್ಲಿರುವ ತೋಟಗಾರಿಕೆ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದಲ್ಲಿರುವ ರೈತ ವಸತಿ ನಿಲಯದಲ್ಲಿ ಸರಿ ಸುಮಾರು ಮೂರು ತಿಂಗಳು ವಸತಿಸಹಿತ ತಮ್ಮ ಕೃಷಿ ಕಾರ್ಯಾನುಭವ ಶಿಬಿರವನ್ನು ಯಶಸ್ವಿಗೊಳಿಸಿದರು.
ಈ ಶಿಬಿರದ ಅಂಗವಾಗಿ ಹಮ್ಮಿಕೊಂಡಂತಹ ಸಮಾರೋಪ ಸಮಾರಂಭವನ್ನು ಹಾಗೂ ವಿಶ್ವ ಆಹಾರ ದಿನವನ್ನು ದಿನಾಂಕ 16/10/2025ರಂದು ಶಿರನಾಳ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟಕರಾಗಿ ಕೃಷಿ ವಿಶ್ವ ವಿದ್ಯಾಲಯ ಧಾರವಾಡದ ಮಾನ್ಯ ಗೌರವಾನ್ವಿತ ಕುಲಪತಿಗಳಾದ ಡಾ. ಪಿ. ಎಲ್. ಪಾಟೀಲರವರು ಆಗಮಿಸಿದ್ದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಖನಾಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಗಂಗೂಬಾಯಿ ಪಾಟ್ಲು ಲೋಕಂಡಿಯವರು ವಹಿಸಿಕೊಂಡಿದ್ದರು ಹಾಗೂ ಗೌರವ ಉಪಸ್ಥಿತರಾಗಿ ಕೃ. ವಿ. ವಿ. ಧಾರವಾಡದ ವ್ಯವಸ್ಥಾಪನಾ ಮಂಡಳಿಯ ಸದಸ್ಯರಾದ ಶ್ರೀಮತಿ ಪಾರ್ವತಿ ಸು. ಕುರ್ಲೆಯವರು ಆಗಮಿಸಿದ್ದರು, ಹಾಗೆ ಮುಖ್ಯ ಅತಿಥಿಗಳ ಸ್ಥಾನವನ್ನು ಕೃ.ಮ.ವಿದ್ಯಾಲಯ ವಿಜಯಪುರದ ವಿದ್ಯಾಧಿಕಾರಿಗಳಾದ ಡಾ.ಎಸ್. ಬಿ. ಜಗ್ಗಿನವರ್, ಪ್ರಾ.ಕೃ.ಸಂ.ಕೇಂದ್ರ ವಿಜಯಪುರದ ಸಹ ಸಂಶೋಧನಾ ನಿರ್ದೇಶಕರಾದ ಡಾ. ಜಿ. ಎಮ್. ಸಜ್ಜನರ ಮತ್ತು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ವಿಜಯಪುರದ ಸಹ ವಿಸ್ತರಣಾ ನಿರ್ದೇಶಕರಾದ ಡಾ.ಎಂ.ಎಂ.ಜಮಾದಾರ ಇವರು ಅಲಂಕರಿಸಿದ್ದರು. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕೃಷಿ ಇಲಾಖೆ ವಿಜಯಪುರದ ಸಹಾಯಕ ನಿರ್ದೇಶಕರಾದ ಶ್ರೀ ಮಂಜುನಾಥ ಜಾನಮಟ್ಟಿ, ಪ್ರಾಧ್ಯಾಪಕರಾದ ಶ್ರೀಮತಿ ಗೌರಿ ಸಜ್ಜನರ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಹಾಗೂ ವಿಜ್ಞಾನಿಗಳಾದ ಡಾ. ವಸ್ತ್ರದ, ಗ್ರಾಮ ಪಂಚಾಯತಿಯ ಸದಸ್ಯರಾದ ಸುರೇಶ ಹಳ್ಳಿ ಹಾಗೂ ಊರಿನ ಹಿರಿಯರಾದ ಒಗೆಪ್ಪಾ ಪೂಜಾರಿಯವರು ಉಪಸ್ಥಿತರಿದ್ದರು. ಮತ್ತು ವಿದ್ಯಾರ್ಥಿನಿಯರಿಗೆ ನಿಯೋಜಿಸಿದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಾದ ಬಸವರಾಜ ಬಿರಾದಾರ ಹಾಗೂ ವಾರದ ಉಸ್ತುವಾರಿ ಶಿಕ್ಷಕರಾದ ಡಾ. ಎ.ಪಿ.ಬಿರಾದಾರವರು ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಯಕ್ರಮದಲ್ಲಿ ರೈತರಿಗೆ ಉಪಯೋಗವಾಗುವಂತಹ ಉತ್ತಮ ವಿಷಯಗಳ ಬಗ್ಗೆ ಮಾಹಿತಿಗಳನ್ನು ನೀಡುವ ವಸ್ತು ಪ್ರದರ್ಶನವನ್ನು ಸಹ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟಕರ ಭಾಷಣದಲ್ಲಿ ಡಾ.ಪಿ.ಎಲ್. ಪಾಟೀಲರವರು ಪೌಷ್ಟಿಕ ಭದ್ರತೆ, ಬೀಜೋತ್ಪಾದನೆ, ಹಾಗೆ ರೈತರ ಸಮಸ್ಯೆಗಳ ಕುರಿತು ಚರ್ಚಿಸಿದರು.
ಈ ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿಯಾದ ಸ್ಪೂರ್ತಿ ಹೊಂಬಳಮಠ ಇವರು ನಡೆಸಿಕೊಟ್ಟರು, ಶಿಬಿರದ ಸಂಯೋಜಕರಾದ ಡಾ.ಎಂ.ವೈ. ತೆಗ್ಗಿಯವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ಹಾಗೂ ಸಹ ಸಂಯೋಜಕರಾದ ಡಾ.ಸಂಗೀತಾ ಜಾಧವರವರು ವಂದಿಸಿದರು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ರೈತ ಮಹಿಳೆಯರು ಪಾಲ್ಗೊಳ್ಳುವ ಮೂಲಕ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

ವರದಿ ಆನಂದ ಬಳ್ಳಾರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!