ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವೀರರಾಣಿ ಕಿತ್ತೂರ ಚನ್ನಮ್ಮ ಜಯಂತಿ ಆಚರಣೆ

ಬಾಗಲಕೋಟೆ: ತಾಲೂಕಿನ ತುಳಸಿಗಿರಿಯ ಶ್ರೀ ಪೂರ್ಣಾನಂದ ಮುನಿ ಆಶ್ರಮದಲ್ಲಿ 23-10-2025 ರಂದು ಗುರುವಾರ ಗ್ರಾಮದ ಕಿತ್ತೂರ ರಾಣಿ ಚೆನ್ನಮ್ಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವೀರರಾಣಿ ಕಿತ್ತೂರ ಚನ್ನಮ್ಮ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ , ಎಲ್ಐಸಿ ಪ್ರತಿನಿಧಿ ಎಂ ವೈ ಹುಲ್ಲಿಕೇರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ ವೀರರಾಣಿ ಚನ್ನಮ್ಮ ಬ್ರಿಟಿಷರಿಗೆ
ಸಿಂಹ ಸ್ವಪ್ನವಾಗಿದ್ದಳು ಅವಳ ಧ್ಯೇಯ ಆದರ್ಶಗಳು ಇಂದಿಗೂ ಅಜರಾಮರ. ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ಚೆನ್ನಮ್ಮಾಜಿ ಎಂದು ವರ್ಣಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರಾಮಾನಂದ ಅಜ್ಜನವರು ಮಾತನಾಡಿ ಚೆನ್ನಮ್ಮಾಜಿಯ ಧೈರ್ಯ, ಸಾಹಸ, ದೇಶಭಕ್ತಿಯಂತ ಆದರ್ಶ ಗುಣಗಳನ್ನು ಇಂದಿನ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಪ್ರಮುಖರಾದ ಶಿವಪುತ್ರಪ್ಪ ದಾಸನ್ನವರ್, ಎಸ್ ಎಸ್ ಪಾಟೀಲ್ ಶ್ರೀಶೈಲ ದಾಸನ್ನವರ, ಶ್ರೀಶೈಲ ಪಾಟೀಲ ಮುಂತಾದವರು ಹಾಜರಿದ್ದರು ಸಮಾಜ ಬಾಂಧವರು ಊರಿನ ಯುವಕರು ಹಿರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!