ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಣಗಳ್ಳಿ ಗ್ರಾ.ಪಂ. ಯಲ್ಲಿ ನರೇಗಾ ಲೆಕ್ಕಪರಿಶೋಧನಾ ಗ್ರಾಮ ಸಭೆ

ಚಾಮರಾಜನಗರ/ ಹನೂರು: ತಾಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿಯಲ್ಲಿ  2024- 25 ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ವಿವಿಧ ಕಾಮಗಾರಿಗಳ ಲೆಕ್ಕಪರಿಶೋಧನಾ ಗ್ರಾಮಸಭೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೋಮಶೇಖರ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ನರೇಗಾ ತಾಲೂಕು ಸಂಯೋಜನಾಧಿಕಾರಿ ನಾರಾಯಣ್ ರವರು, ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಗ್ರಾಮಗಳ ಅಭಿವೃದ್ಧಿಗಾಗಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳುವ ಅವಕಾಶಗಳಿವೆ. ಈ ಯೋಜನೆಯಡಿ ರೇಷ್ಮೆ, ಕೃಷಿ, ತೋಟಗಾರಿಕೆ ಮತ್ತು ಅರಣ್ಯ ಇಲಾಖೆಗಳ ಸಹಯೋಗದೊಂದಿಗೆ ಅಲ್ಲದೆ ಗ್ರಾಮಪಂಚಾಯತಿ ಮೂಲಕ ವೈಯಕ್ತಿಕ ಮತ್ತು ಸಾಮುದಾಯಿಕ ಕಾಮಗಾರಿಗಳನ್ನು  ಕೈಗೊಳ್ಳಬಹುದಾಗಿದೆ. ಆದ್ದರಿಂದ ಸಾರ್ವಜನಿಕರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು.

2024 – 25ನೇ ಸಾಲಿನಲ್ಲಿ ಮನಗಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅರಣ್ಯ ಇಲಾಖೆಯಿಂದ 2, ಕೃಷಿ ಇಲಾಖೆಯಿಂದ 2, ತೋಟಗಾರಿಕಾ ಇಲಾಖೆಯಿಂದ 2, ರೇಷ್ಮೆ ಇಲಾಖೆಯಿಂದ 2 ಸೇರಿದಂತೆ 47 ಸಾಮೂದಾಯಿಕ ಕಾಮಗಾರಿಗಳು ಹಾಗೂ 160 ವೈಯಕ್ತಿಕ ಕಾಮಗಾರಿಗಳು ಸೇರಿದಂತೆ ಒಟ್ಟು 207 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು ಇದಕ್ಕಾಗಿ 1.36 ಕೋಟಿ ಹಣ ಖರ್ಚಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಪರಿಶೋಧನೆ ನಡೆಸಲಾದ 207 ಕಾಮಗಾರಿಗಳನ್ನೂ ಸಭೆಯಲ್ಲಿ ಓದಿ ತಿಳಿಸಲಾಯಿತು. ಸಾರ್ವಜನಿಕರಿಗೆ ಅನುಮಾನಗಳು ಇದ್ದಲ್ಲಿ ಸಭೆಯಲ್ಲಿ ಬಹಿರಂಗವಾಗಿ ಚರ್ಚಿಸಿ ಸ್ಪಷ್ಟತೆ ಪಡೆದುಕೊಳ್ಳಬಹುದು ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ನೋಡಲ್ ಅಧಿಕಾರಿಯಾಗಿ ಶಿಕ್ಷಣ ಇಲಾಖೆಯ ದೊಡ್ಡಸಿದ್ದೇಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸೋಮಶೇಖರ್, ಉಪಾಧ್ಯಕ್ಷರಾದ ಚಿಕ್ಕ ವೆಂಕಟಮ್ಮ, ಸದಸ್ಯರಾದ ಲತಾ ರಾಚಪ್ಪ, ಮಾದೇವ, ಕುಮಾರ, ಸೋಮಣ್ಣ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!