ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸೌಜನ್ಯ ಹಡಪದ ಅನುಮಾನಸ್ಪದ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಒತ್ತಾಯಿಸಿ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ಹಡಪದ ವಿದ್ಯಾರ್ಥಿನಿಯನ್ನು ಅನುಮಾನಸ್ಪದ ಕೊಲೆ ಮಾಡಿರುವ ವ್ಯಕ್ತಿಯನ್ನು ಗಲ್ಲಿಗೇರಿಸಲು ಒತ್ತಾಯ.


‌ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಮೃತ ದೇಹವು ನಿನ್ನೆ ಶಹಾಪೂರ ತಾಲೂಕು ಗೋಗಿ ಕಾಲುವೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಳಿ ಸೌಜನ್ಯ ಮೃತ ದೇಹವು ಪತ್ತೆಯಾಗಿದೆ. ಸೌಜನ್ಯ ಕೋಡೆಕಲ್ ಅವರು ಗಂಗಾವತಿ ತಾಲೂಕಿನಲ್ಲಿ ವಾಸ್ತವ್ಯವಿದ್ದು, ಪಿ.ಯು. ಸಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು ತನ್ನ ಊರಿಗೆ ಹೊರಟವಳನ್ನು ನರರಾಕ್ಷಸರು ಕೊಲೆ ಮಾಡಿ ಕಾಲುವೆಯಲ್ಲಿ ಹಾಕಿದ್ದಾರೆ , ಸರಕಾರ ಕೂಡಲೇ ಆರೋಪಿಗೆ ಬಂಧಿಸಿ ಕಾನೂನಿನ ಅಡಿಯಲ್ಲಿ ಗಲ್ಲಿಗೇರಿಸಬೇಕು ಎಂದು ಶೋಷಿತ ಸಣ್ಣ ಸಣ್ಣ ಹಿಂದುಳಿದ ಹಡಪದ ಅಪ್ಪಣ್ಣ ಸಮಾಜದ ವತಿಯಿಂದ ನಾಳೆ ಮಂಗಳವಾರ ದಿನಾಂಕ 28 ರಂದು ಬೆಳಿಗ್ಗೆ 10:30 ನಿಮಿಷಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಲಾಗುತ್ತದೆ ‌ಈ ರಾಕ್ಷಸ ಪ್ರವೃತ್ತಿಯ ವ್ಯಕ್ತಿಗಳು ಯಾವುದೇ ರಾಜಕೀಯ ಪಕ್ಷಕ್ಕೆ, ಯಾವುದೇ ಧರ್ಮಕ್ಕೆ ಸೇರಿದರೂ ಎಷ್ಟೇ ಪ್ರಭಾವಿತನಾಗಿದ್ದರೂ ಕೂಡಲೇ ಬಂಧಿಸಿ ಕಾನೂನಿನಲ್ಲಿ ಗಲ್ಲಿಗೇರಿಸಬೇಕು ಮೃತಳ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಬೇಕು ಕೊಲೆ ಮಾಡಿದ ವ್ಯಕ್ತಿಗಳು ಆಸ್ತಿಯನ್ನು ಮುಟ್ಟುಗೋಲು ಹಾಕಿ, ಕುಟುಂಬಸ್ಥರಿಗೆ ಹಸ್ತಾಂತರಿಸಬೇಕು 5ಎಕರೆ ಜಮೀನು ಮತ್ತು ಒಬ್ಬರಿಗೆ ಸರಕಾರಿ ನೌಕರಿ ನೀಡಬೇಕೆಂದು ಸರಕಾರಕ್ಕೆ ಒತ್ತಾಯಿಸಿ ಈ ಘಟನೆಯನ್ನು ಎಲ್ಲಾ ಪ್ರಜ್ಞಾವಂತರು ಎಲ್ಲಾ ವರ್ಗದ ಜನರು ಖಂಡಿಸಿದ್ದಾರೆ ಈ ಹೋರಾಟಕ್ಕೆ ಅನೇಕ ಕನ್ನಡ ಪರ ಸಂಘಟನೆಗಳು ಮತ್ತು ಸಂಘ ಸಂಸ್ಥೆಗಳು, ಈ ಸಣ್ಣ ಸಮುದಾಯಕ್ಕೆ ಬೆಂಬಲವನ್ನು ನೀಡುವುದರ ಮೂಲಕ ಹೆಚ್ಚಿನ ಜನಸಂಖ್ಯೆ ಸೇರಬೇಕು ಎಂದು ಯಾದಗಿರಿ ಜಿಲ್ಲೆಯ ಅಧ್ಯಕ್ಷರು ಡಾ.ಮಲ್ಲಿಕಾರ್ಜುನ ಹಡಪದ ಕುಳಗೇರಿ ತಿಳಿಸಿದರು. ಈ ಹೋರಾಟವು ಇವರ ನೇತೃತ್ವದಲ್ಲಿ ನಡೆಯಲಿದೆ ಇದೇ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯ ಅಧ್ಯಕ್ಷರು ಈರಣ್ಣ ಸಿ ಹಡಪದ ಸಣ್ಣೂರ, ಮತ್ತು ಕಲಬುರಗಿ ಜಿಲ್ಲೆಯ ಗೌರವಾಧ್ಯಕ್ಷರು ಬಸವರಾಜ ಹಡಪದ ಸುಗೂರ ಎನ್, ಹಾಗೂ ಸಮಾಜದ ಹಿರಿಯ ಮುಖಂಡರು ಅಯ್ಯಣ ಹಡಪದ ಹಾಗೂ ಮಲ್ಲಣ್ಣ ಹಡಪದ ಕನ್ನೆಳ್ಳಿ. ಮತ್ತು ಹುಣಸಗಿ ತಾಲೂಕಾಧ್ಯಕ್ಷ ಹಣಮಂತ್ರಾಯ ಹಡಪದ, ಬಸವರಾಜ ಹಡಪದ ಮುದ್ದನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು ಎಂದು ಸಮಾಜದ ಸೇವಕ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್ ಅವರು ಅವರು ಪತ್ರಿಕೆಯ ಪ್ರಕಟಣೆಗೆ ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!