ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅನುಭವ ಮಂಟಪ ಉತ್ಸವ ರಥಯಾತ್ರೆಗೆ ಚಾಲನೆ

ಬೀದರ್/ ಚಿಟಗುಪ್ಪ : 12 ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪವು ಸಂಸದೀಯ ಪ್ರಜಾಪ್ರಭುತ್ವಕ್ಕೆ ಅಡಿಪಾಯವಾಗಿದೆ
ಎಂದು ಅನುಭವ ಮಂಟಪದ ಸಂಚಾಲಕ ಪೂಜ್ಯ ಶ್ರೀ ಶಿವಾನಂದ ಸ್ವಾಮೀಜಿ ನುಡಿದರು.

ನಗರದ ಗಾಂಧಿ ವೃತ್ತದಲ್ಲಿ 46 ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ
ಮಾತನಾಡಿದ ಶ್ರೀಗಳು ಬಸವಣ್ಣನವರು ವಿಶ್ವದ ತತ್ವಜ್ಞಾನಿ, ಸಮಾಜ ಸುಧಾರಕ ಮತ್ತು ಸಮಾನತೆಯ ಹರಿಕಾರರು, ಅವರು ಜಾತಿರಹಿತ ಸಮಾಜವನ್ನು ಕಟ್ಟಿದರು.ಅಂದು ಅವರು ಕಟ್ಟಿದ ಅನುಭವ ಮಂಟಪವು ಸೌಂದರ್ಯತೆ, ಸಹೋದರತ್ವ, ಭಾವೈಕ್ಯತೆಯ ಮೌಲ್ಯಾಧಾರಿತ ಸಿದ್ಧಾಂತಗಳ ಸಂದೇಶಗಳನ್ನು ಜಾಗತಿಕ ಪ್ರಪಂಚಕ್ಕೆ ಸಾರಿದೆ. ಈ ನಿಟ್ಟಿನಲ್ಲಿ ಬಸವಾದಿ ಶರಣರ ಉದ್ದೇಶಗಳು ಈಡೇರಿಸುವದಕ್ಕಾಗಿ ನಾವೆಲ್ಲರೂ ಇಂದು
ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕೆಂದು ತಿಳಿಸಿದರು.

ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಸಂಗಮೇಶ ಎನ್ ಜವಾದಿ ಕರಪತ್ರ ಬಿಡುಗಡೆ ಹಾಗೂ ರಥಯಾತ್ರೆಕ್ಕೆ ಚಾಲನೆ ನೀಡಿ
ಮಾತನಾಡಿದ ಅವರು ಜಗತ್ತಿಗೆ ವೈಚಾರಿಕ ಕ್ರಾಂತಿಯ ಕೊಡುಗೆ ನೀಡಿದ ಸಮಾನತೆಯ ಹರಿಕಾರ ಬಸವಣ್ಣನವರು ಅನುಭವ ಮಂಟಪದ ಮುಖಾಂತರ ಕಲ್ಯಾಣ ರಾಜ್ಯ ನಿರ್ಮಾಣ ಮಾಡಿದರು. ಪರಿಣಾಮ ಅವರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರತಿ ವರ್ಷವೂ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಪರಮ ಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯ ಸಾನಿಧ್ಯದಲ್ಲಿ ಶರಣ ಕಮ್ಮಟ ಅನುಭವ ಮಂಟಪ ಉತ್ಸವವೂ ಯಶಸ್ವಿಯಾಗಿ ನಡೆದುಕೊಂಡು ಬರುತ್ತಲಿದೆ. ಈದಿಗ 46ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವಕ್ಕೆ ಸರ್ವ ರೀತಿಯಿಂದ ಸಜ್ಜಾಗಿದೆ. ಇದೆ ತಿಂಗಳ 29,30 ರಂದು ಅತ್ಯಂತ ವೈಭವದಿಂದ, ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಈ ಉತ್ಸವಕ್ಕೆ ಸರ್ವರಿಗೂ ಆದರದ ಸ್ವಾಗತವಿದೆ ಎಂದರು.

ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷೆ ಶರಣೆ ಇಂದುಮತಿ ಗಾರಂಪಳ್ಳಿ, ರಾಷ್ಟ್ರೀಯ ಬಸವದಳದ ತಾಲೂಕಾಧ್ಯಕ್ಷ ರಾಜಶೇಖರ ದೇವಣಿ, ಶರಣ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರರಾದ ಭೀಮಶೆಟ್ಟಿ ವಡ್ಡನಕೇರಾ, ರಾಷ್ಟ್ರೀಯ ಬಸವ ದಳದ ತಾಲೂಕು ಉಪಾಧ್ಯಕ್ಷ
ಅನಿಲಕುಮಾರ ಸಿಂದಗಿರಿ,
ಗಣ್ಯರಾದ ಸತೀಶ ಮಹೇಂದ್ರಕರ,ಶೌರ್ಯ ಜವಾದಿ, ಗೋಪಾಲರಡ್ಡಿ, ಮನೋಹರ್ ಮೇಧಾ, ಬಸವರಾಜ ಪಂಗರಗಿ ಸೇರಿದಂತೆ ಶರಣ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!