ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೀದಿ ನಾಟಕ ಹಾಗೂ ಜಾಗೃತಿ ಗೀತೆಗಳ ಮೂಲಕ ಜನಜಾಗೃತಿ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗೋತಗಿ ಗ್ರಾಮದಲ್ಲಿ 2025 – 26ನೇ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯದ ಕುರಿತು ಬೀದಿ ನಾಟಕ ಹಾಗೂ ಜಾಗೃತಿ ಗೀತೆಗಳ ಮೂಲಕ ಜನಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮಕ್ಕೆ ತಮಟೆಯನ್ನು ನುಡಿಸುವುದರ ಮೂಲಕ ಚಾಲನೆಯನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ಸಿ. ಎಚ್ ಒ. ಶ್ರೀ ದೇವರಾಜ ಪೂಜಾರಿ, ಪಿ.ಎಚ್.ಸಿ.ಒ ಭುವನೇಶ್ವರಿ ಬಳಿಗಾರ, ಆಶಾ ಕಾರ್ಯಕರ್ತೆ ಶ್ರೀಮತಿ ದೀಪಾ ಕರೆಗುಡ್ಡ ಮತ್ತು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರತ್ನಾ ತಳವಾರ ಸೇರಿದಂತೆ ಗ್ರಾಮದ ಹಿರಿಯರು ಚಾಲನೆ ಕೊಟ್ಟರು.

ಶ್ರೀ ಗುರು ಪುಟ್ಟರಾಜ ಸ್ವರ ಸಂಗೀತ ಹಾಗೂ ಸಾಂಸ್ಕೃತಿಕ ಕಲಾ ತಂಡ ಹನುಮಸಾಗರ ಕಲಾವಿದರಾದ ಸುಕಮುನಿಯಪ್ಪ ಗುಮಗೇರಿ, ದೇವಪ್ಪ ಟೆಂಗುಂಟಿ, ಸಿದ್ದಪ್ಪ ಡಿ. ಕಲಾಲಬಂಡಿ, ಶಿವರಾಯಪ್ಪ ತೆಗ್ಗಿಹಾಳ, ವೆಂಕಟೇಶ ಹನುಮಸಾಗರ, ಮರಿಸ್ವಾಮಿ ನಂದಿಹಾಳ, ಶಶಿಕುಮಾರ ಮನ್ನಾಪುರ, ನಾಗರಾಜ ಮನ್ನಾಪುರ, ನೇತ್ರಾವತಿ ಯಲಬುರ್ಗಾ, ಮಹಾಲಕ್ಷ್ಮೀ ಕೊಪ್ಪಳ ಇವರುಗಳು ಆರೋಗ್ಯ ಇಲಾಖೆಯಿಂದ ಇರುವ ಸೌಲಭ್ಯಗಳು ಸೇರಿದಂತೆ ಸಾಂಕ್ರಾಮಿಕ ರೋಗದ ಬಗ್ಗೆ ಬೀದಿನಾಟಕ ಹಾಗೂ ಹಾಡುಗಳ ಮೂಲಕ ಜನಜಾಗೃತಿಯನ್ನು ಮೂಡಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!