ಚಾಮರಾಜನಗರ/ ಹನೂರು: ಸುಮಾರು ₹2.5 ಕೋಟಿಗಳ ವೆಚ್ಚದಲ್ಲಿ ನಡೆಯುತ್ತಿರುವ ರಾಮನಗುಡ್ಡ ಕೆರೆಗೆ ನೀರು ಸರಬರಾಜು ಮಾಡುವ ಪೈಪ್‌ಲೈನ್ ಕಾಮಗಾರಿಯನ್ನು ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹನೂರು ತಾಲೂಕಿನ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಈ ಪೈಪ್‌ಲೈನ್ ಕಾಮಗಾರಿಯನ್ನು ಗುತ್ತಿಗೆದಾರರು ಪೂರ್ಣ ಪ್ರಮಾಣದಲ್ಲಿ ನಿಗದಿತ ಅವಧಿಯಲ್ಲಿ ಮುಗಿಸಬೇಕೆಂದು ಶಾಸಕರು ಸೂಚಿಸಿದರು. ಕಾಮಗಾರಿ ಪೂರ್ಣಗೊಂಡ ನಂತರ ರೈತರು ಶಾಶ್ವತ ನೀರಾವರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಒಟ್ಟು 1.45 ಕಿಲೋಮೀಟರ್ ಉದ್ದದ ಈ ಪೈಪ್‌ಲೈನ್ ಕಾಮಗಾರಿಯನ್ನು ₹2.5 ಕೋಟಿಗಳ ವೆಚ್ಚದಲ್ಲಿ ಕೈಗೊಳ್ಳಲಾಗಿದ್ದು, ಈ ಭಾಗದ ರೈತರು ಸಹಕಾರ ನೀಡುವುದರ ಮೂಲಕ ಯೋಜನೆಯನ್ನು ಯಶಸ್ವಿಯಾಗಿ ಮುಗಿಸಲು ಸಹಕರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಚಿನ್ನ ವೆಂಕಟ್, ಡಿ.ಆರ್. ಹಾರ್ಡ್‌ವೇರ್ ಸೀನಪ್ಪ, ರಾಜು ನಾಯ್ಡು ಹಾಗೂ ಇತರರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್




















