ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಚಿಕ್ಕೋಡಿ ಮತ್ತು ಇಂಜಿನಿಯರಿಂಗ್ ಘಟಕ ಬೆಂಗಳೂರು ತಾಲೂಕಾ ಸಾರ್ವಜನಿಕ ಆಸ್ಪತ್ರೆ ಅಥಣಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ನಗರದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ 50 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಶಂಕುಸ್ಥಾಪನೆಯನ್ನು ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿ ಹಾಗೂ ಕಾಗವಾಡದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ರಾಜು ಕಾಗೆಯವರು ನೆರವೇರಿಸಿದರು.
ನಂತರ ಮಾತನಾಡಿದ ಲಕ್ಷ್ಮಣ ಸವದಿ ಅವರು, “ಅಥಣಿ ಆಸ್ಪತ್ರೆಯಲ್ಲಿ ಈಗಾಗಲೇ ವೈದ್ಯರು, ನರ್ಸ್ ಗಳು ಹಾಗೂ ಆಡಳಿತ ಮಂಡಳಿ ಶ್ರದ್ಧೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ, ವಿವಿಧ ಭಾಗಗಳಿಂದ ಸಾರ್ವಜನಿಕರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಿರುವುದು ಆಸ್ಪತ್ರೆಯ ವಿಶ್ವಾಸಾರ್ಹತೆಗೆ ಸಾಕ್ಷಿ, “ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಸರಿಯಾದ ಆಹಾರ ಸೇವನೆ ಮಾಡಬೇಕು. ಆರೋಗ್ಯವೇ ಸಮೃದ್ಧ ಜೀವನದ ಆಧಾರ,” ಎಂದು ಹೇಳಿದರು.
ಇದೇ ಕಾರ್ಯಕ್ರಮದಲ್ಲಿ ಅಥಣಿ ಪುರಸಭೆಯ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ಬುಟಾಳಿ, ಪುರಸಭೆಯ ಉಪಾಧ್ಯಕ್ಷರಾದ ಭುವನೇಶ್ವರಿ ಯಂಕಚ್ಚಿ, ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ದತ್ತಾ ವಾಸ್ಟರ್ ಮುಖಂಡರಾದ ಶ್ರೀ ರಾಮನಗೌಡ ಪಾಟೀಲ್, ಶ್ರೀ ಮಹಾಂತೇಶ್ ಬಾಡಗಿ, ಶ್ರೀ ಮಂಜು ಹೋಳಿಕಟ್ಟಿ ,ಶ್ರೀ ಶಿವಾನಂದ ದಿವಾನಮಳ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಧಿಕಾರಿಗಳಾದ ಶ್ರೀ ಶಿವಾನಂದ್ ಕಲ್ಲಾಪುರ, ಅಥಣಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎಂ ಆರ್ ಮುಂಜೆ , ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಬಸನಗೌಡ ಕಾಗೆ ಮತ್ತು ಸರ್ಕಾರಿ ಆಸ್ಪತ್ರೆಯ ವೈದ್ಯರು, ಆಶಾ ಕಾರ್ಯಕರ್ತೆಯರು, ಸಹಾಯಕಿಯರು, ಹಿರಿಯ ಮುಖಂಡರು, ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.
ವರದಿ. ವಿಠ್ಠಲ ಖೋಕಾಟೆ



















