ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಚಿತ ರಕ್ತದಾನ ಶಿಬಿರ

ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಓಂ ಶ್ರೀ ಗುರು ಹಾಸ್ಪಿಟಲ್ ಮತ್ತು ಜೈ ಕನ್ನಡಿಗರ ಸೇನೆ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತವಾಗಿ ಉಚಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ರಕ್ತದಾನದ ಮಹತ್ವದ ಕುರಿತು ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು ಒಂದು ಬಾರಿ ಒಬ್ಬ ವ್ಯಕ್ತಿ ರಕ್ತದಾನ ಮಾಡಿದರೆ ಮೂರು ಜೀವಗಳನ್ನು ಆಪತ್ಕಾಲದಲ್ಲಿ ಉಳಿಸಬಹುದು ಅದೇ ರೀತಿಯಾಗಿ ವರ್ಷದಲ್ಲಿ ಒಬ್ಬ ವ್ಯಕ್ತಿ ಎರಡು ಬಾರಿ ಮಾಡಿದರೆ ಹೃದಯಾಘಾತದ ತೊಂದರೆಯಿಂದ ಪಾರಾಗಬಹುದು ಹಾಗೂ ಬೊಜ್ಜಿನ ಸಮಸ್ಯೆಯಿಂದ ಬಳಲುವವರು ವರ್ಷದಲ್ಲಿ ಎರಡು ಬಾರಿ ರಕ್ತದಾನ ಮಾಡಿದರೆ ಆರೋಗ್ಯಕರ ಜೀವನ ನಡೆಸಬಹುದು ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು. ಈ ಸಂದರ್ಭದಲ್ಲಿ ಡಾ. ಬಸನಗೌಡ ಪಾಟೀಲ್ , ಜೈ ಕನ್ನಡಿಗರ ಸೇನೆಯ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಭರತ್ ಎಮ್. ದೊರೆ, ಜೈ ಕನ್ನಡಿಗರ ಸೇನೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಓಂ ಶ್ರೀ ಗುರು ಹಾಸ್ಪಿಟಲನ ಸಿಬ್ಬಂದಿಯವರು ಭಾಗವಹಿಸಿದ್ದರು ಎಂದು ಜೈ ಕನ್ನಡಿಗರ ಸೇನೆಯ ತಾಲೂಕ ಅಧ್ಯಕ್ಷರಾದ ಭರತ್ ಎಂ. ದೊರೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!