ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೆಹಲಿಯ ಸ್ಟಾರ್ಟ್ಅಪ್ ಶಿಕ್ಷಾ ಫೌಂಡೇಶನ್ ನಿಂದ ಹಡಪದ ಸಮಾಜದ ಸೇವಕ ಮಲ್ಲಿಕಾರ್ಜುನ ಬಿ ಸುಗೂರ ಎನ್ ಗೆ ಡಾಕ್ಟರೇಟ್ ಪ್ರಶಸ್ತಿ.

ಕಲಬುರಗಿ : ಹಡಪದ ಅಪ್ಪಣ್ಣ ಕ್ಷೌರಿಕ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರ ಕನ್ನಡ ನಾಡು ನುಡಿ ನೆಲ ಜಲ ಭಾಷೆ ಮತ್ತು ಜನಪರ ಹೋರಾಟಗಳು, ಅವರ ಸಮಾಜ ಸೇವೆಯನ್ನು ಕಂಡು ಜೀ20 MSME (ಮೈಕ್ರೋ ಸ್ಮಾಲ್‌ ಮತ್ತು ಮೀಡಿಯಂ ಎಂಟರ್ಪ್ರೈಸಸ್ ಅಂತರರಾಷ್ಟ್ರೀಯ ಸಂಸ್ಥೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದ್ದು ಸಂತೋಷದ ಸಂಗತಿ ಚಿಕ್ಕ ವಯಸ್ಸಿನಲ್ಲಿ ದೊಡ್ಡ ಪಧವಿ ಗಿಟ್ಟಿಸಿಕೊಳ್ಳುವುದು ಸಾಧಾರಣ ಮಾತಲ್ಲ.
ಸಾಮಾಜಿಕವಾಗಿ ಇವರು ಸಲ್ಲಿಸುತ್ತಿರುವ ಸಮಾಜ ಸೇವೆಯನ್ನು ಗುರುತಿಸಿ ದೆಹಲಿಯ ಸ್ಟಾರ್ಟ್ಅಪ್ ಶಿಕ್ಷಾ ಫೌಂಡೇಶನ್, ರವರು ಇವರಿಗೆ ಗೌರವ ಡಾಕ್ಟರೇಟನ್ನು ನೀಡಿದ್ದಾರೆ.
ಮೂಲತ ಇವರು ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕು ಸುಗೂರ ಎನ್ ಗ್ರಾಮದಲ್ಲಿ ವಾಸವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಸಂಘವನ್ನು ಕಟ್ಟಿಕೊಂಡು ತಮ್ಮಿಂದ ಆದಂತಹ ಸಮಾಜ ಸೇವೆಯನ್ನು ನಿಸ್ವಾರ್ಥವಾಗಿ ಸಲ್ಲಿಸುತ್ತಿದ್ದಾರೆ. ಒಟ್ಟು ಇಲ್ಲಿಯವರೆಗೆ ೧೬೫೦ಕ್ಕೊ ಹೆಚ್ಚು ಅನಾಥರಿಗೆ ಉಚಿತವಾಗಿ ಕ್ಷೌರ ಸೇವೆ ಸಲ್ಲಿಸಿದ್ದಾರೆ.
ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್. ಅವರು ಬಡ ಕುಟುಂಬದಲ್ಲಿ ಜನಿಸಿದ್ದು ಇವರ ಸೇವೆಗೆ ಅನೇಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಅವರ ಮುಡಿಗೇರಿವೆ. ಇವರು ಜೂನ್ 6, 1993 ರಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಜನಿಸಿದರು. ತಮ್ಮ ವಿಶಿಷ್ಟ ಕ್ಷೌರಿಕ ವೃತ್ತಿಯ ಸೇವೆ. ಸಾಹಿತ್ಯ, ಸಮಾಜಸೇವೆ ಮತ್ತು ಪತ್ರಿಕಾ ವರದಿಗಾರರಾಗಿ ಗುರುತಿಸಿಕೊಂಡಿದ್ದಾರೆ. ಆರೋಗ್ಯ ಶಿಬಿರ, ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಪಾರ ಸಾಧನೆಗೈದಿದ್ದಾರೆ. ಇವರು ಜೀವನದಲ್ಲಿ ತುಂಬಾ ಕಷ್ಟಪಟ್ಟು ತಮ್ಮ ಕಷ್ಟವನ್ನು ಪಕ್ಕಕ್ಕಿಟ್ಟು ಬೇರೆಯವರ ಕಷ್ಟವನ್ನು ಅರಿತು ಈ ಒಂದು ಸಮಾಜ ಸೇವೆಯಲ್ಲಿ ತೊಡಗಿ ಬೇರೆಯವರಿಗೆ ಸ್ಪೂರ್ತಿಯಾಗಿ ಜೀವನವನ್ನು ಸಾಗಿಸುತ್ತಿದ್ದಾರೆ ಇಂತಹ ವ್ಯಕ್ತಿಗಳನ್ನು ಗುರುತಿಸುತ್ತಾ ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಈ ಒಂದು ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!