ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯಮಟ್ಟದ ಕವನ ವಾಚನದಲ್ಲಿ ಗುರುತಿಸಿಕೊಂಡ ಮಂಜನಾಯಕ್ ಬಿ. ಆರ್.

ಶಿವಮೊಗ್ಗ : ಭದ್ರಾವತಿ ತಾಲೂಕಿನ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಘ, ಜನ್ನಾಪುರ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಮಂಜನಾಯಕ್ ಬಿ. ಆರ್. ಅವರು ತಮ್ಮ ಕಾವ್ಯಪ್ರತಿಭೆಯಿಂದ ಹೆಸರನ್ನು ಗಳಿಸಿದ್ದಾರೆ.

ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ಶಿಕಾರಿಪುರ ತಾಲೂಕು ಮಟ್ಟದ ದಸರಾ ಕವಿ ಗೋಷ್ಠಿಗೆ ಆಯ್ಕೆಯಾಗಿ ಕವನವಾಚನ ಮಾಡಿದ ಅವರು, ನಂತರ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕರ್ನಾಟಕ ಜಾನಪದ ಪರಿಷತ್‌ಗಳ ಸಹಯೋಗದಲ್ಲಿ ಶಿವಮೊಗ್ಗದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಕವನ ವಾಚನ ಕಾರ್ಯಕ್ರಮಕ್ಕೂ ಆಯ್ಕೆಯಾಗಿ ತಮ್ಮ ಮನಮೋಹಕ ಕವನ ವಾಚನದಿಂದ ಪ್ರಶಂಸೆಯನ್ನು ಗಳಿಸಿದ್ದಾರೆ.

ಇವರ ಈ ಸಾಧನೆ ಭದ್ರಾವತಿ ತಾಲ್ಲೂಕಿನ ಶಿಕ್ಷಕ ವೃಂದಕ್ಕೆ ಹಾಗೂ ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಗೆ ಗೌರವ ತಂದುಕೊಟ್ಟಿದೆ ಎಂದು ಪ್ರಕಟಣೆ ತಿಳಿಸಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!